ಬಜೆಟ್‌ನಲ್ಲಿ ಎಸ್.ಸಿ/ಎಸ್.ಟಿ ಜನಾಂಗಕ್ಕೆ ಅನುದಾನ ಮೀಸಲಾತಿಗೆ ಒತ್ತಾಯ

ಕೋಲಾರ,ಜು.೭- ಇಂದು ನಡೆಯುವ ರಾಜ್ಯ ಸರ್ಕಾರದ ಬಜೆಟ್ ಅಧಿವೇಶನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾತಿ ಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡುವ ಜತೆಯಲ್ಲಿ ಅನುದಾನ ಸಮರ್ಪಕವಾಗಿ ವಿನಿಯೋಗ ಆಗಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಸೂಲಿಕುಂಟೆ ರಮೇಶ್ ಆಗ್ರಹಿಸಿದ್ದಾರೆ
ಪತ್ರಿಕಾ ಹೇಳಿಕೆ ನೀಡಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತಮ್ಮ ಬಜೆಟ್‌ನಲ್ಲಿ ಶೇಕಡ ೨೫ ರಷ್ಟು ಅನುದಾನ ಮೀಸಲಿಡಬೇಕು ಅದನ್ನು ಜಾತಿ ಜನಸಂಖ್ಯೆಗೆ ಅನುಗುಣವಾಗಿ ಸಮಾನವಾಗಿ ಹಂಚಿಕೆ ಮಾಡಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಕ್ ಹುದ್ದೆಗಳನ್ನು ಭರ್ತಿ ಮಾಡಬೇಕು ನಂತರ ಖಾಸಗಿ ಕ್ಷೇತ್ರಗಳಲ್ಲಿಯೂ ಶೇಕಡ ೨೫ರಷ್ಟು ಮೀಸಲಾತಿಯನ್ನು ಕಲ್ಪಿಸುವ ಮಸೂದೆಗೆ ಮಾಡಿ ಶೆಡ್ಯೂಲ್ ಒಂಬತ್ತರಲ್ಲಿ ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ
ತಿದ್ದುಪಡಿ ಮಾಡಿ ದಲಿತರ ಮೇಲೆ ದೌರ್ಜನ್ಯವೆಸಗಿ ಕೇಸು ದಾಖಲಾದಾಗ ಸಂತ್ರಸ್ತರ ಮೇಲೆ ಕೌಂಟರ್ ಕೇಸು ದಾಖಲಿಸುವುದನ್ನು ನಿಬಂಧಿಸಬೇಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆ ಅಡಿ ತಿದ್ದುಪಡಿ ಕಾಲಮ್ ೧೮ಎ ಪೊಲೀಸ್ ಠಾಣೆಗಳಲ್ಲಿ ಅನುಷ್ಠಾನಗೊಳಿಸಬೇಕು.ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ವಸತಿ ನಿಲಯ ವಿದ್ಯಾರ್ಥಿಗಳಿಗೆ ಬೆಲೆ ಏರಿಕೆಯಂತೆ ವಿದ್ಯಾರ್ಥಿ ವೇತನ ಹೆಚ್ಚಿಸಬೇಕು. ರಾಜ್ಯದ ಎಲ್ಲಾ ವಿದ್ಯಾರ್ಥಿನಿಲಯಗಳನ್ನು ಉನ್ನತೀಕರಿಸಬೇಕು. ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು, ಎಸ್.ಸಿ.ಪಿ.ಟಿ.ಎಸ್.ಪಿ ಕಾಯ್ದೆಯಲ್ಲಿನ ಕಾಲಂ ೭ ಡಿ ರದ್ದುಗೊಳಿಸುವ ಮೂಲಕ ಪರಿಶಿಷ್ಟ ಆರ್ಥಿಕ ಸಬಲೀಕರಣಗೊಳಿಸಬೇಕು. ಅನುದಾನ ಅನುಷ್ಠಾನ ದುರ್ಬಳಕೆ ಮಾಡುವ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ಪಡೆಸಿದ್ದಾರೆ.