ಬಜೆಟ್ ನಲ್ಲಿ ಪರಿಶಿಷ್ಟರಿಗೆ ಅನ್ಯಾಯ

(ಸಂಜೆವಾಣಿ ವಾರ್ತೆ)ರಾಯಚೂರು,ಫೆ.೨೦-ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ಅಭಿವೃದ್ದಿಗಾಗಿ ಯಾವುದೆ ವಿಶೇಷ ಕಾರ್ಯಕ್ರಮ ಘೋಷಿಸಿಲ್ಲ. ರಾಜ್ಯ ಬಜೆಟ್‌ನಲ್ಲಿ ಎಸ್ಸಿಎಸ್ಟಿ ಜನಾಂಗಕ್ಕೆ ಅನ್ಯಾಯವಾಗಿದೆ ಎಂದು ಮಾದಿಗ ಮಹಾಸಭಾ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಿಜೆಪಿ ಮುಖಂಡ ವಿರುಪಾಕ್ಷಪ್ಪ ಪತ್ತೇಪುರು ಪ್ರತಿಕ್ರಿಯಿಸಿದ್ದಾರೆ.ಮಾಲಾ ಮತ್ತು ಮಾದಿಗ ಸಮಾಜದ ಓಟು ಪಡೆದುಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಮಾಲಾ ಮತ್ತು ಮಾದಿಗರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಈ ಸಮಾಜದ ಮುಖಂಡರಿಗೆ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ಎಸ್ಸಿಎಸ್ಟಿ ಜನಾಂಗಕ್ಕೆ ಮೀಸಲಿಟ್ಟ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸಿಕೊಂಡು ಸಮುದಾಯಕ್ಕೆ ದ್ರೋಹ ಬಗೆಯಲಾಗುತ್ತಿದೆ. ಬಹುಸಂಖ್ಯಾತ ಮಾದಿಗ ಮಾಲ ಸಮುದಾಯಕ್ಕೆ ಅನ್ಯಾಯ ಮಾಡಿರುವುದನ್ನು ಸರಿಪಡಿಸಲು ಮುಖ್ಯಮಂತ್ರಿಗಳು ಮುಂದಾಗಬೇಕು ಎಂದು ವಿರುಪಾಕ್ಷಪ್ಪ ಪತ್ತೆಪೂರು ಒತ್ತಾಯಿಸಿದ್ದಾರೆ.