ಬಟ್ಟೆ ಬ್ಯಾಗ್ ವಿತರಿಸಿ ಅರಿವು

ಮೈಸೂರು: ಪರಿಸರ ಸ್ನೇಹಿ ತಂಡ ಹಾಗೂ ಕೆ.ಎಂ.ಪಿ.ಕೆ.ಟ್ರಸ್ಟ್ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಪ್ಲಾಸ್ಟಿಕ್ ಬಿಡಿ ಬಟ್ಟೆ ಬ್ಯಾಗ್ ಹಿಡಿ ಎಂಬ ಸಂದೇಶದೊಂದಿಗೆ ಚಾಮುಂಡಿ ಬೆಟ್ಟದ ಮೆಟ್ಟಿಲು ಸಮೀಪ ಭಕ್ತರಿಗೆ ಬಟ್ಟೆ ಬ್ಯಾಗ್ ವಿತರಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಗಿರೀಶ್ ಮಾತನಾಡಿ, ಚಾಮುಂಡಿ ಬೆಟ್ಟದ ಪರಿಸರ ರಕ್ಷಿಸಲು ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ವಲಯಕ್ಕೆ ನಾಗರಿಕರು ಕೈಜೋಡಿಸಬೇಕಿದೆ. ಮನೆಯಿಂದಲೇ ಪ್ಲಾಸ್ಟಿಕ್ ಬಳಕೆಗೆ ತರದ ಹಾಗೇ ಸಾರ್ವಜನಿಕರು ಮುಂದಾಗಬೇಕು ಎಂದು ಸಲಹೆ ನೀಡಿದರು.
ಮೈಸೂರು ನಗರಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗರಾಜ್ ಮಾತನಾಡಿ, ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಲ್ಲಿಸಲು ಸಾರ್ವಜನಿಕರ ಸಹಭಾಗಿತ್ವ ಬಹಳ ಮುಖ್ಯ. ಮೈಸೂರು ಸ್ವಚ್ಛನಗರಿಯಾಗಿದ್ದು, ಆಷಾಡ ಮಾಸದಲ್ಲಿ ಬೆಟ್ಟಕ್ಕೆ ಲಕ್ಷಾಂತರ ಮಂದಿ ಭಕ್ತರು ಆಗಿಮಿಸುತ್ತಾರೆ. ಪ್ಲಾಸ್ಟಿಕ್ ತಡೆಗಟ್ಟಲು ಟಾಸ್ಕ್ ಫೆÇೀರ್ಸ್ ರಚಿಸಲಾಗುವುದು ಸಾರ್ವಜನಿಕರು ಸಹಕರಿಸಬೇಕು ಎಂದರು.
ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅಜಯ್ ಶಾಸ್ತ್ರಿ, ಚಿನ್ನ ಬೆಳ್ಳಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಸುರೇಶ್ ಗೋಲ್ಡ್, ಹಿರಿಯ ಆರೋಗ್ಯ ನಿರೀಕ್ಷಕ ಶಿವಪ್ರಸಾದ್, ಪರಿಸರ ಇಂಜಿನಿಯರ್ ಜ್ಯೋತಿ, ಕಿರಿಯ ಆರೋಗ್ಯ ನಿರೀಕ್ಷಕರು ಪ್ರೀತಿ, ರಾಕೇಶ್, ಸಚಿಂದ್ರ, ಚಕ್ರಪಾಣಿ, ಚೇತನ್ ಆರಾಧ್ಯ, ಬಸವರಾಜು, ಮಂಜುನಾಥ, ಉಮಾ, ವನಜಾಕ್ಷಿ, ರಂಗಸ್ವಾಮಿ, ಮಂಜುನಾಥ್ ಸೇರಿ ಇತರರು ಇದ್ದರು.