ಬಡತನ ಸಾಧನೆಗೆ ಅಡ್ಡಿಯಲ್ಲ

ಕಲಬುರಗಿ:ಆ.11:ಕೇವಲ 20-30 ವಿದ್ಯಾರ್ಥಿಗಳಿಂದ ಪ್ರಾರಂಭಿಸಲಾದ ಸಂಸ್ಥೆ ಈಗ 60 ರಿಂದ 700 ವರೆಗೆ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ ಎಂದರೆ ನಾಗೇಂದ್ರ ಮೋಘಾ ರವರ ಪರಿಶ್ರಮದಿಂದಾಗಿ ಈ ಶಿಕ್ಷಣ ಸಂಸ್ಥೆ ಶೈಕ್ಷಣಿಕ ಕ್ರಾಂತಿ ಮಾಡಿದೆ, ಅವರ ಜೊತೆಯಾಗಿ ಸಿಬ್ಬಂದಿ ವರ್ಗದವರು ಕೂಡ ಬೆನ್ನೆಲುಬಾಗಿ ನಿಂತಿದ್ದಾರೆ ನಿಮ್ಮ ಕಾರ್ಯಮೆಚ್ಚುವಂತಹದ್ದು ಎಂದು ತಿಳಿಸುತ್ತಾ ಗ್ರಾಮೀಣ ಭಾಗದ ಈ ಸಂಸ್ಥೆಯೊಂದರಿಂದಲೆ 20 ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ. ಗ್ರಾಮೀಣ ಭಾಗದ ಬಡ ಮಕ್ಕಳು ಸಾಧನೆಗೆ ಅಡ್ಡಿಯಲ್ಲ ಎಂಬುವುದು ಸಾಧಿಸಿದ್ದಾರೆಂದು ಆಗಸ್ಟ್ 8ರಂದು ಕಾಳಗಿ ಬಸವಶ್ರೀ ಶಿಕ್ಷಣ ಸಂಸ್ಥೆಯ ಶ್ರೀ ಅಣವೀರಭದ್ರೇಶ್ವರ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆ ಕೋರವಾರ ಶಾಲೆಯಲ್ಲಿ 2022-23ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ ಗರಿಷ್ಠ ಅಂಕ ಪಡೆದ ಹಾಗೂ ಜಬಾಹರ ನವೋದಯ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಜಿಲ್ಲಾ ಕಸಾಪ ಅಧ್ಯಕ್ಷರಾದ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿದರು.

15 ವರ್ಷಗಳಿಂದ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವತಿಯಿಂದ ಸಹಾಯ ಸಹಕಾರ ಪಡೆದರೆ ತಮ್ಮ ಶಿಕ್ಷಣ ಸೇವೆಗೆ ಇನ್ನಷ್ಟು ಬಲಗೊಳ್ಳಲಿದೆ ಎಂದು ಚೇಂಬರ ಆಫ ಕಾಮರ್ಸನ ಮಾಜಿ ಅಧ್ಯಕ್ಷರಾದ ಉಮಾಕಾಂತ ನಿಗ್ಗುಡಗಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಳಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಶಿವಶರಣಪ್ಪ ಮೋತಕಪಲ್ಲಿ ಉಪನ್ಯಾಸ ನೀಡಿದರು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಕಾಳಗಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಮಹೇಶ ಬಡಿಗೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೋರವಾರ ಬಸವಶ್ರೀ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾಗೇಂದ್ರ ಆರ್. ಮೋಘಾ ಅಧ್ಯಕ್ಷತೆ ವಹಸಿದರು. ವೇ ಮೂ. ಶ್ರೀ ಧನಂಜಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದರು

ಶಿಕ್ಷಣ ಸಂಸ್ಥೆಯ ಬಾಬುರಾವ ಪೂಜಾರಿ, ಶಿವಶರಣಪ್ಪ ಯಾಧವ, ಪತ್ರಕರ್ತರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಊರಿನ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.