ಬಡವರಿಗಾಗಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಗ್ಯಾರಂಟಿ ಯೋಜನೆ ಜಾರಿ


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಫೆ.೧೯;ಬಡವರಿಗಾಗಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಗ್ಯಾರಂಟಿ ಯೋಜನೆಗಳನ್ನು  ಜಾರಿಗೆ ತರಲಾಗುವುದು. ಸಾರ್ವಜನಿಕರ ಹಣ ಬಡವರು, ದೀನದಲಿತರು ಸೇರಿದಂತೆ ಎಲ್ಲ ವರ್ಗದವರಿಗೂ ತಲುಪಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.ಹಿರಿಯೂರು ತಾಲ್ಲೂಕಿನ ಐಮಂಗಲ ಗ್ರಾಮದ ಬೋರಪ್ಪ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಕುರಿತು ‘ಐಮಂಗಲ ಹೋಬಳಿ ಮಟ್ಟದ ಸಮಾವೇಶ” ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ. ಶೇ.98ರಷ್ಟು ಮಹಿಳೆಯರು ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾವಲಂಬನೆಯಿಂದ ಸಮರ್ಥವಾಗಿ ಕುಟುಂಬ ಹಾಗೂ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇನ್ನೂ 5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ. ಇದರ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಒತ್ತು ನೀಡಲಾಗುವುದು ಎಂದರು.