ಬಡವರ ಪರ ಬಜೆಟ್ : ರಾಘವೇಂದ್ರ ಗುತ್ತೇದಾರ

ಕಾಳಗಿ. ಫೆ.18. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಬಡವರ ಪರವಾಗಿದೆ ಎಂದು ಕಾಂಗ್ರೆಸ್ ಮಾಧ್ಯಮ ವಕ್ತಾರ ರಾಘವೇಂದ್ರ ಗುತ್ತೇದಾರ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 15 ಬಜೆಟ್ ಆಗಿದ್ದು. ಇದೊಂದು ಐತಿಹಾಸಿಕ ಬಜೆಟ್ ಆಗಿದೆ. ಸಿದ್ದರಾಮಯ್ಯನವರು 15ನೇ ಬಾರಿ ಬಜೆಟ್ ಮಂಡನೆ ಮಾಡಿರೋದು ಗಿನ್ನಿಸ್ ದಾಖಲೆಯಾಗಿದಂತಾಗಿದೆ. ದೀನ, ದಲಿತ, ಶೋಷಿತ, ಬಡವರ ಪರ ಬಜೆಟ್ ಮಂಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬಜೆಟ್ ನಲ್ಲಿ ಕಲಬುರಗಿಗೆ ಬರಪೂರ ಯೋಜನೆಗಳನ್ನು ನೀಡುವ ಮೂಲಕ ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಜಿಲ್ಲೆಗೆ 1000 ಎಕರೆ ಪ್ರದೇಶದಲ್ಲಿ ಪಿಪಿಪಿ ಮಾದರಿ ಮೆಗಾ ಟೆಕ್ಸ್ಟ್ ಟೈಲ್ ಪಾರ್ಕ್ ಘೋಷಣೆ ಮಾಡಿದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಮತ್ತು ಮತ್ತು 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನ ಗೊಳಿಸಿದಲ್ಲದೆ 50 ಕೋಟಿ ಅನುದಾನವನ್ನು ನೀಡಿ ನಿರುದ್ಯೋಗಿಗಳಿಗೆ ದಾರಿ ದೀಪವಾಗಿದ್ದಾರೆ. ಒಟ್ಟಿನಲ್ಲಿ ಈ ಬಜೆಟ್ ಉತ್ತಮ ಬಜೆಟ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಪ್ರಿಯಾಂಕ್ ಖರ್ಗೆ ಸೇರಿದಂತೆ ಎಲ್ಲಾ ಸಚಿವರಿಗೆ ಶಾಸಕರಿಗೆ ಅಭಿನಂದಿಸುವುದಾಗಿ ಗುತ್ತೇದಾರ ತಿಳಿಸಿದ್ದಾರೆ.