ಬಡ, ಮಧ್ಯಮ ವರ್ಗದ ಮತ್ತು ರೈತರ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಬೇಕು : ಶಾಸಕ ಲಕ್ಷ್ಮಣ ಸವದಿ

ಅಥಣಿ :ಮೇ.17: ತಾಲೂಕಿನ ಬಡ. ಮಧ್ಯಮ ವರ್ಗದ. ಕೂಲಿ ಕಾರ್ಮಿಕ ಮತ್ತು ರೈತರ ಮಕ್ಕಳು ಕೂಡ ಉತ್ತಮ ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಬೇಕು ಹಾಗೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಕೇಂದ್ರೀಯ ವಿದ್ಯಾಲಯಕ್ಕೆ ಅನುಮತಿ ಪಡೆದುಕೊಳ್ಳಲಾಗಿದ್ದು, ಇದೇ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ಆರಂಭಿಸಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅವರು ಬುಧವಾರ ಪಟ್ಟಣದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ 3 ರಲ್ಲಿ ತಾತ್ಕಾಲಿಕ ತರಗತಿಗಳನ್ನ ಪ್ರಾರಂಭ ಮಾಡುವ ಸಲುವಾಗಿ ಕೇಂದ್ರಿಯ ತಂಡ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಅವರು ಶಾಲೆಗೆ ಭೇಟಿ ನೀಡಿ ಮೂಲ ಸೌಲಭ್ಯಗಳಾದ ತರಗತಿ ಕೋಣೆ, ಕುಡಿಯುವ ನೀರು, ಬೆಳಕಿನ ವ್ಯವಸ್ಥೆ. ಮಕ್ಕಳ ಸುಕ್ಷತೆ ಹಾಗೂ ಶೌಚಾಲಯ ಸೇರಿದಂತೆ ಇನ್ನುಳಿದ ಸೌಕರ್ಯಗಳನ್ನ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳಗಾವಿ ಜಿಲ್ಲೆಯ ಗಡಿಭಾಗವಾದ ಅಥಣಿ ತಾಲೂಕು ಕೂಡ ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕು. ನಮ್ಮ ತಾಲೂಕಿನ ರೈತರ ಮಕ್ಕಳು ಕೂಡ ಉತ್ತಮ ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಕೇಂದ್ರೀಯ ಮಹಾವಿದ್ಯಾಲಯವನ್ನು ತಾಲೂಕಿಗೆ ಮಂಜೂರಾತಿ ಮಾಡಿಸಿದ್ದೇನೆ. ಶೀಘ್ರದಲ್ಲಿಯೇ ಕೇಂದ್ರದ ತಂಡವು ಅಥಣಿಗೆ ಆಗಮಿಸಿ ತಾತ್ಕಾಲಿಕವಾಗಿ ಆರಂಭಿಸಲಾಗುವ ಈ ಶಾಲೆಯನ್ನು ಪರಿಶೀಲನೆ ಮಾಡಲಿದ್ದಾರೆ. ಕೇಂದ್ರೀಯ ವಿದ್ಯಾಲಯಕ್ಕಾಗಿ ಐನಾಪುರ ರಸ್ತೆಗೆ ಹೊಂದಿಕೊಂಡಿರುವಂತೆ ಸ್ಥಳ ನಿಗದಿ ಮಾಡಲಾಗಿದ್ದು, ಅಲ್ಲಿ ಕಟ್ಟಡ ನಿರ್ಮಾಣಕ್ಕೆ ಸದ್ಯದಲ್ಲಿ ಶಂಕು ಸ್ಥಾಪನೆ ನೆರವೇರಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಮೋರಟಗಿ, ಜಿಪಂ ಅಭಿಯಂತರ ವೀರಣ್ಣ ವಾಲಿ, ಲೋಕೋಪಯೋಗಿ ಇಲಾಖೆಯ ಜಯಾನಂದ ಹಿರೇಮಠ. ಮಲ್ಲಿಕಾರ್ಜುನ ಮಗದುಮ್ಮ. ಕ್ಷೇತ್ರ ಸಮನ್ವಯಾಧಿಕಾರಿ ಗೌಡಪ್ಪ ಖೋತ. ಪುರಸಭೆ ಸದಸ್ಯ ರಾಜು ಬುಲಬುಲೆ ಸಿ.ಆರ್.ಪಿ. ಎನ್ ಎಂ ಹಿರೇಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


” ಉಳ್ಳವವರಿಗೆ ಎಲ್ಲಿಯಾದರೂ ಶಿಕ್ಷಣ ದೊರಯುತ್ತದೆ. ಆದರೆ ಬಡ ಮಕ್ಕಳಿಗೆ ಅಷ್ಟು ಸುಲಭವಾಗಿ ಶಿಕ್ಷಣ ದೊರೆಯುವದಿಲ್ಲ. ಇಂತಹ ಶಾಲೆಗಳಲ್ಲಿ ಅವಕಾಶ ದೊರೆತರೆ ಅವರು ಉನ್ನತವಾದ ಸ್ಥಾನಮಾನವನ್ನೂ ಪಡೆಯಲು ಸಹಾಯಕವಾಗುತ್ತದೆ ಕೇಂದ್ರೀಯ ವಿದ್ಯಾಲಯ ಆರಂಭವಾಗುವುದುರಿಂದ ತಾಲೂಕಿನ ಜನರಿಗೆ ತುಂಬಾ ಅನುಕೂಲವಾಗಲಿದೆ. ಕೇಂದ್ರಿಯ ವಿದ್ಯಾಲಯ ಮಂಜೂರಾತಿಗಾಗಿ ನಾನು ಅನೇಕ ಬಾರಿ ದೆಹಲಿಗೆ ಹೋಗಿ ಶ್ರಮಿಸಿದ್ದೇನೆ. ಇದರಿಂದ ನಮ್ಮ ತಾಲೂಕಿನ ಬಡ ಹಾಗೂ ಮಧ್ಯಮ ವರ್ಗದ ಮತ್ತು ರೈತರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರಕಲಿದೆ ಎಂಬ ಖುಷಿ ನನಗಿದೆ. ತಾಲೂಕಿನ ಸಾರ್ವಜನಿಕರು ಮತ್ತು ರೈತರು ತಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಇದರ ಪ್ರಯೋಜನ ಪಡೆದುಕೊಳ್ಳಬೇಕು.”

          - ಲಕ್ಷ್ಮಣ ಸವದಿ, ಅಥಣಿ ಶಾಸಕ.