ಬರಗೂರರ ಅಮೃತಮತಿಗೆ ಪ್ರಶಸ್ತಿಗಳ ಸುರಿಮಳೆ

ಖ್ಯಾತ ಸಾಹಿತಿ ಹಾಗು ನಿರ್ದೇಶಕ ಪ್ರೊ‌ ಬರಗೂರು ರಾಮಚಂದ್ರಪ್ಪ ನಿರ್ದೇಶನದ ” ಅಮೃತಮತಿ” ಚಿತ್ರ ದೇಶ ವಿದೇಶಗಳಲ್ಲಿ ಸದ್ದು ಮಾಡುತ್ತಿದೆ. ಈಗಾಗಲೇ ಚಿತ್ರೀಕರಣ ಪೂರ್ಣಗೊಂಡಿದ್ದು ಕೊರೊನಾ ಸೋಂಕು ಕಡಿಮೆಯಾದ ನಂತರ ತೆರೆಯ‌ ಮೇಲೆ‌ ಬರುವ ಎಲ್ಲಾ ಸಾದ್ಯತೆಗಳಿವೆ.

ಮುಂಬೈನ ಸಂಸ್ಥೆಯೊಂದು ಪ್ರದರ್ಶನದ ಹಕ್ಕುಗಳನ್ನು ಪಡೆದಿದೆ‌. ಹದಿಮೂರನೇ ಶತಮಾನದ ಕನ್ನಡ ಕವಿ ಜನ್ನನ `ಯಶೋಧರ ಚರಿತೆ’ ಆಧರಿಸಿ ಮರುವ್ಯಾಖ್ಯಾನದ

ಮೂಲಕ ಮರು ಸೃಷ್ಟಿರೂಪದಲ್ಲಿ ನಿರ್ಮಾಣಗೊಂಡ‌ ಚಿತ್ರ ಇದು `ಅಮೃತ ಮತಿ’ ಕನ್ನಡ ಚಿತ್ರಕ್ಕೆ ವಿದೇಶಿ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅಪಾರ ಮನ್ನಣೆ ಪಡೆಯುತ್ತಿದೆ ಇಲ್ಲಿ ತನಕ‌ ಹತ್ತು ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾದ ಹೆಗ್ಗಳಿಕೆ ಚಿತ್ರದ್ದು. ಇತ್ತೀಚೆಗೆ ಜರುಗಿದ `ಲಾಸ್ ಏಂಜಲೀಸ್ ಸನ್ ಅಂತರರಾಷ್ಟ್ರೀಯ ಚಿತ್ರೋತ್ಸವ’ದ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿದ್ದ, `ಅಮೃತಮತಿ’ ಚಿತ್ರ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.

ಜೊತೆಗೆ ಚಿತ್ರಕತೆ ರಚನೆಗಾಗಿ ನಿರ್ದೇಶಕ ಬರಗೂರು ರಾಮಚಂದ್ರಪ್ಪ ವೈಯಕ್ತಿಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಈ ಹಿಂದೆ ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ `ಅಮೃತಮತಿ’ಗೆ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಲಭ್ಯವಾಗಿತ್ತು. ನಾಯಕಿ ಪಾತ್ರದ ಹರಿಪ್ರಿಯ ಎರಡು ಚಿತ್ರೋತ್ಸವಗಳಲ್ಲಿ `ಅತ್ಯುತ್ತಮನಟಿ’ ಪ್ರಶಸ್ತಿ ಪಡೆದಿದ್ದರು.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ನಿರ್ದೇಶಕ‌ ಪ್ರೊ‌.‌ಬರಗೂರು‌ ರಾಮಂದ್ರಪ್ಪ‌, ತಾವು ನಿರ್ದೇಶಿಸಿದ ಕೆಲವು ಚಿತ್ರಗಳು ಉತ್ತಮ ಚಿತ್ರ ಪ್ರಶಸ್ತಿ ಪಡೆದಿವೆ.ನಿರ್ದೇಶನಕ್ಕಾಗಿ ನೀಡುವ

ರಾಜ್ಯದ ಉನ್ನತ ಮನ್ನಣೆಯಾದ `ಪುಟ್ಟಣ್ಣ ಕಣಗಾಲ್’ ಪ್ರಶಸ್ತಿ ಬಂದಿದೆ. ತಾವೇ ರಚಿಸಿದ ಕತೆ, ಗೀತೆ, ಸಂಭಾಷಣೆಗಳಿಗೂ ಪ್ರಶಸ್ತಿಗಳು ಲಭ್ಯವಾಗಿವೆ. ಆದರೆ ಇಲ್ಲಿವರೆಗೆ ನಾನು ರಚಿಸಿದ ಚಿತ್ರಕತೆಗೆ ಒಂದೂ ಪ್ರಶಸ್ತಿ ಬಂದಿರಲಿಲ್ಲ. ಲಾಸ್ ಏಂಜಲೀಸ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮೊಟ್ಟಮೊದಲಬಾರಿಗೆ

ಚಿತ್ರಕತೆಗಾಗಿ ನನಗೆ ಪ್ರಶಸ್ತಿ ಬಂದಿರುವುದು ತುಂಬಾ ಸಂತೋಷತಂದಿದೆ. ಇದನ್ನು ನಮ್ಮ ಚಿತ್ರತಂಡಕ್ಕೆ ಅರ್ಪಿಸುವುದಾಗಿ ತಿಳಿಸಿದ್ದಾರೆ. ಪುಟ್ಟಣ್ಣ ಚಿತ್ರಕ್ಕೆ ಬಂಡವಾಳ ಹಾಕಿದ್ದು ಹರಿಪ್ರಿಯ, ಕಿಶೋರ್, ತಿಲಕ್, ಸುಂದರರಾಜ್, ಪ್ರಮೀಳಾ ಜೋಷಾಯ್, ಸುಪ್ರಿಯಾರಾವ್, ಅಂಬರೀಶ್ಸಾ ರಂಗಿ, ವತ್ಸಲಾ ಮೋಹನ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರಕ್ಕೆ ನಾಗರಾಜ್ ಆದವಾನಿ ಛಾಯಾಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಸಂಯೋಜನೆ ಇದೆ.