ಬರ ನಿರ್ವಹಣೆ ಕ್ರಮಕ್ಕೆ ಸಚಿವ ಸೂಚನೆ

ರಾಯಚೂರು.ಮಾ.೧೫- ಜಿಲ್ಲೆಯಲ್ಲಿ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡುವಲ್ಲಿ ಎಲ್ಲ ಅಧಿಕಾರಿಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಪ್ರಕಾಶ್ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ಅವರು ಹೇಳಿದರು.
ನಿನ್ನೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಬರ ಪೀಡಿತ ತಾಲೂಕು ಪ್ರದೇಶಗಳಲ್ಲಿ ತೆಗೆದುಕೊಂಡ ನೀರಿನ ಸಮಸ್ಯೆ ಕಾಮಗಾರಿ, ತಾಲೂಕುವಾರು ಕೆರೆ ಹಾಗೂ ಎಷ್ಟು ಕೆರೆಗಳನ್ನು ಸಂಪೂರ್ಣ ತುಂಬಿಸಿರುವ ಮಾಹಿತಿ ಪಡೆದುಕೊಂಡು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆ ಮೇಲ್ವಿಚಾರಣೆಗಾಗಿ ಸಹಾಯವಾಣಿ ಸ್ಥಾಪಿಸಲಾಗಿದ್ದು, ಸಹಾಯವಾಣಿಗೆ ಬರುವ ಕರೆಗಳನ್ನು ಸ್ವೀಕರಿಸಬೇಕು.
ಕರೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸಬೇಕು. ನೀರಿನ ಸಮಸ್ಯೆ ಕಂಡುಬಂದ ಪ್ರದೇಶಗಳಲ್ಲಿ ಸಮಸ್ಯೆ ಪರಿಹಾರಕ್ಕಾಗಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಸಣ್ಣ ನೀರಾವರಿ ಸಚಿವ ಎನ್.ಎಸ್ ಬೋಸರಾಜು, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಮಸ್ತಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ಮಾನ್ವಿ ಶಾಸಕ ಜಿ. ಹಂಪಯ್ಯ ನಾಯಕ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯಿತಿ ಅಧಿಕಾರಿ ರಾಹುಲ್ ತು ಕಾರಾಮ ಪಾಂಡೈ, ಎಸ್ಪಿ ನಿಖಿಲ್.ಬಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.