ಬಲರಾಮನ ದಿನಗಳಲು ಶೀರ್ಷಿಕೆ ಅನಾವರಣ

ಚಿ. ಗೋ ರಮೇಶ್
ಆ ದಿನಗಳು ಚಿತ್ರದ ಬಳಿಕ ನಿರ್ದೇಶಕ ಕೆ.ಎಂ ಚೈತನ್ಯ ಇದೀಗ ಬಲರಾಮನ ದಿನಗಳು ಚಿತ್ರದ ಮೂಲಕ ಕಟ್ಟಿಕೊಡಲು ಮುಂದಾಗಿದ್ದಾರೆ.
ನಟ ವಿನೋದ್ ಪ್ರಭಾಕರ್ ನಟಿಸುತ್ತಿರುವ ೨೫ ನೇ ಚಿತ್ರ ಇದು. ಹೀಗಾಗಿ ಒಂದಷ್ಟು ಕುತೂಹಲ ಕೆರಳಿಸಿದೆ.
ಗೃಹ ಸಚಿವ ಡಾ. ಜಿ.ಪರಮೇಶ್ವರ್ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದರು. ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ..
ಈ ವೇಳೆ ನಟ ತಂದೆಯ ಬಿರುದಾದ ಟೈಗರ್ ಅನ್ನು ನಟ ವಿನೋದ್ ಪ್ರಭಾಕರ್ ಅವರಿಗೆ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಚಿವ ಪರಮೇಶ್ವರ್, ಟೈಗರ್ ಪ್ರಭಾಕರ್ ಪರಿಚಯವಾಗಿದ್ದರು. ಅವರ ಮಗ ವಿನೋದ್ ಪ್ರಭಾಕರ್ ೨೫ ನೇ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ್ದು ಸಂತಸ ತಂದಿದೆ. ಇನ್ನೂ ೨೫ ಚಿತ್ರ ಮಾಡಲಿ ಎಂದು ಹರಸಿದರು.
ನಿರ್ಮಾಪಕ ಶ್ರೇಯಸ್ ಮಾತನಾಡಿ ನನ್ನ ಕನಸಿಗೆ ನನ್ನ ತಂದೆ, ತಾಯಿ ಮತ್ತು ಸಹೋದರ ಶಕ್ತಿ ತುಂಬುತ್ತಿದ್ದಾರೆ. ವಿನೋದ್ ಪ್ರಭಾಕರ್ ಚಿತ್ರರಂಗದ ಗುರುಗಳು. ಅವರ ಸಹಕಾರದಿಂದ ನಾನು ಪದ್ಮಾವತಿ ಫಿಲಂಸ್ ಎಂಬ ಸಂಸ್ಥೆ ಹುಟ್ಟುಹಾಕಿ ಈ ಚಿತ್ರ ನಿರ್ಮಿಸುತ್ತಿದ್ದೇನೆ ಎಂದರು. ನಿರ್ದೇಶಕ ಕೆ.ಎಂ ಚೈತನ್ಯ ಭೂಗತಲೋಕದ ಸಿನಿಮಾ. ಭೂಗತ ಲೋಕದ ಜೊತೆಗೆ ಸಮಾಜ, ರಾಜಕೀಯ ಹೀಗೆ ಎಲ್ಲಾ ಆಯಾಮಗಳು ಇರುತ್ತವೆ. ಚಿತ್ರದ ಬಗ್ಗೆ ಈಗಲೇ ಹೆಚ್ಚು ಹೇಳುವುದು ಕಷ್ಟ. ನಿಜಜೀವನದ ಕಥೆ ಆಧರಿಸಿದ ಕಾಲ್ಪನಿಕ ಚಿತ್ರ. ಇದು ಯಾವುದೇ ವ್ಯಕ್ತಿಯ ಕುರಿತಾದ ಚಿತ್ರ ಅಲ್ಲ. ಇದರಲ್ಲಿ ಮನರಂಜನೆ ಇರುತ್ತದೆ. ಇಡೀ ಕುಟುಂಬ ನೋಡುವ ಚಿತ್ರ ಎಂದರು.

ಅಪ್ಪನ ಬಿರುದು ಮಗನಿಗೆ
ಟೈಗರ್ ಬಿರುದಿಗೆ ಧಕ್ಕೆ ಆಗದಂತೆ ನೋಡಿಕೊಳ್ಳಲಾಗುವುದು. ಚೈತನ್ಯ ಅವರ ‘ಆ ದಿನಗಳು’ ಚಿತ್ರ ನೋಡಿದಾಗಿನಿಂದ ಅವರ ಜೊತೆಗೆ ಕೆಲಸ ಮಾಡಬೇಕು ಎಂಬ ಆಸೆ ಇತ್ತು. ಅದು ಈಗ ಈಡೇರಿದೆ. ಅವರೇನು ಬಲರಾಮನ ಪಾತ್ರ ಸೃಷ್ಠಿ ಮಾಡಿದ್ದಾರೋ, ಪ್ರಾಣ ಒತ್ತೆಯಿಟ್ಟು, ಬೆವರು-ರಕ್ತ ಹರಿಸಿ ಅದಕ್ಕೆ ನ್ಯಾಯ ಸಲ್ಲಿಸುತ್ತೇನೆ.

  • ವಿನೋದ್ ಪ್ರಭಾಕರ್, ನಾಯಕ
    ತಮ್ಮ ನಿರ್ದೇಶನದ ಚಿತ್ರಗಳಲ್ಲಿ ಪ್ರತ್ಯಕ್ಷವಾಗಿ ಅಲ್ಲದಿದ್ದರೂ, ಪರೋಕ್ಷವಾಗಿ ಸಂದೇಶ ಹೇಳಿದ್ದೇನೆ. ಇದರಲ್ಲೂ ಅದು ಮುಂದುವರೆಯುತ್ತದೆ. ಭೂಗತಲೋಕದ ಬಗ್ಗೆ ಸಾಕಷ್ಟು ಕಥೆಗಳನ್ನು ಮಾಡಿದ್ದೆ. ಅದರಲ್ಲಿ ಯಾವ ಕಥೆ ಮಾಡಬೇಕು ಅಂತ ಹೇಳಿದ್ದು ಅವರೆ. ಜೊತೆಗೆ ಬಹಳ ವರ್ಷಗಳಿಂದ ವಿನೋದ್ ಪ್ರಭಾಕರ್ ಜೊತೆಗೆ ಚಿತ್ರ ಮಾಡುವ ಆಸೆ ಇತ್ತು. ಅದಕ್ಕೆ ಪೂರಕವಾಗಿ ಕಥೆ ಸಿಕ್ಕಿದೆ.
  • ಕೆ.ಎಂ ಚೈತನ್ಯ, ನಿರ್ದೇಶಕ