ಬಳ್ಳಾರಿಯಲ್ಲಿ ಸಂಭ್ರಮದ ಯೋಗಿ ನಾರಾಯಣ ಕೈವಾರ ತಾತಯ್ಯನವರ ಜಯಂತಿ


ಬಳ್ಳಾರಿ,ಮಾ.8 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 297ನೇ ಯೋಗಿ ನಾರಾಯಣ ಕೈವಾರ ತಾತಯ್ಯನವರ ಜಯಂತಿಯು ಸಂಭ್ರಮದಿಂದ ನಡೆಯಿತು.
ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಯೋಗಿ ನಾರಾಯಣ ಕೈವಾರ ತಾತಯ್ಯನವರ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿ ಜಯಂತಿಯ ಶುಭಾಷಯ ತಿಳಿಸಿದರು.
ಕರ್ನಾಟಕ ಪ್ರದೇಶ ಬಲಿಜ ಸಂಘದ ನಿರ್ದೇಶಕ ಕಾಂಡ್ರಾ ಸತೀಶ್ ಕುಮಾರ್  ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರರೆಡ್ಡಿ ಅವರು ಚಾಲನೆ ನೀಡಿದರು.
ಮೆರವಣಿಗೆಯು ಬಲಿಜ ಭವನದಿಂದ ಆರಂಭವಾಗಿ ಬಿಡಿಎಎ ಫುಟ್‍ಬಾಲ್ ಮೈದಾನದ ಸಭಾಂಗಣದವರೆಗೆ ತಲುಪಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್ ಬಾಬು, ಸಮಾಜದ ಹಿರಿಯ ಮುಖಂಡರುಗಳು ಹಾಗೂ ಇತರರು ಉಪಸ್ಥಿತರಿದ್ದರು.