
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮೇ.23: ಬಳ್ಳಾರಿ ಜಿಲ್ಲಾ ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಸಂಘದ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸದಿರುವುದರಿಂದ ಕೂಡಲೇ ಸಂಘಕ್ಕೆ ಚುನಾವಣೆ ನಡೆಸುವಂತೆ ಒತ್ತಾಯಿಸುವುದಾಗಿ ಸಂಘದ ಸದಸ್ಯರಾದ ಎಂ.ಎನ್.ಟಿ ಮೆಹಬೂಬ್ ಭಾಷ ಹಾಗೂ ಮತ್ತಿತರರು ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಂದು ಬೆಳಿಗ್ಗೆ ಸಂಘದ ಕಛೇರಿಯಲ್ಲಿ ಸದಸ್ಯರೆಲ್ಲಾ ಸೇರಿ ಸಭೆಯನ್ನು ನಡೆಸಿ ಸಂಘಕ್ಕೆ ಚುನಾವಣೆ ನಡೆಸುವಂತೆ ಒತ್ತಾಯಿಸಲು ತೀರ್ಮಾನಿಸಿದ್ದಾರೆ. ಕಳೆದ 6 ತಿಂಗಳಿನಿಂದಲೂ ಸಂಘದ ಪದಾಧಿಕಾರಿಗಳು ಯಾವುದೇ ಸಮಸ್ಯೆಗಳನ್ನು ಬಗೆಹರಿಸದೇ ಕೇವಲ ಅಧಿಕಾರವನ್ನು ಮಾತ್ರ ಅನುಭವಿಸುತ್ತಿದ್ದಾರೆ. ಇದರಿಂದಾಗಿ ಸಂಘದ ಸದಸ್ಯರುಗಳಿಗೆ ಸಮಸ್ಯೆ ಉಂಟಾಗಿದ್ದು ತಮ್ಮೆಲ್ಲಾ ಸಮಸ್ಯೆಗೆ ಚುನಾವಣೆಯೊಂದೇ ಪರಿಹಾರವೆಂದು ಎಲ್ಲಾ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಸಂಘಕ್ಕೆ ಚುನಾವಣೆ ನಡೆಸುವಂತೆ ಒತ್ತಾಯಿಸಲಾಗಿದೆ ಎಂದು ಎಂ.ಎನ್.ಟಿ ಮೆಹಬೂಬ್ ಭಾಷ ತಿಳಿಸಿದ್ದಾರೆ.