ಬಳ್ಳಾರಿ ಜಿಲ್ಲಾ ಸರ್ಕಾರಿ ವಕೀಲರಾಗಿ ವಿ.ಜನಾರ್ಧನ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಅ.12: ಜಿಲ್ಲೆಯ ಸರ್ಕಾರಿ ವಕೀಲರನ್ನಾಗಿ ನಗರದ ವಿ.ಜನಾರ್ಧನ ಅವರನ್ನು ನೇಮಕ ಮಾಡಿದೆ.
ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಹಾಲಿ ವಕೀಲರ ಸಂಘದ ಕಾರ್ಯದರ್ಶಿ ಬಿ.ರವೀಂದ್ರನಾಥ್ ಈ ಸ್ಥಾನದಲ್ಲಿದ್ದರು. ಈಗ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಜನಾರ್ಧನ ಅವರನ್ನು ನೇಮಕ ಮಾಡಿದೆ.
ಕಳೆದ 38 ವರ್ಷಗಳಿಂದ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ವಕೀಲರಾಗಿ ಸೇವೆ ಸಲ್ಲಿಸಿರುವ ಇವರು. ವಕೀಲರ ಸಂಘದ ಕಾರ್ಯದರ್ಶಿ ಮತ್ತು ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದಾರೆ. ಅಲ್ಲದೆ ಅನೇಕ ಸಾಮಾಜಿಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.