
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ: ನಗರದ ರಾಘವ ಕಲಾ ಮಂದಿರದಲ್ಲಿ ಇಂದಿನಿಂದ ಎರೆಡು ದಿನಗಳ ಕಾಲ ಬಳ್ಳಾರಿ ಜಿಲ್ಲಾ 22 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ.
ಸಮ್ಮೇಳನದ ಅಂಗವಾಗಿ ಬೆಳಿಗ್ಗೆ ಕಾರ್ಯಕ್ರಮದ ಸ್ಥಳದಲ್ಲಿ ಮೇಯರ್ ಎಂ.ರಾಜೇಶ್ವರಿ ಸುಬ್ಬರಾಯಡು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಾಡ ಧ್ವಜ ಮತ್ತು ಪರಿಷತ್ತಿನ ಧ್ವಜಗಳ ಆರೋಹಣ ಸಹ ಈ ಸಂದರ್ಭದಲ್ಲಿ ಗಣ್ಯರಿಂದ ನಡೆಯಿತು.
ಈ ಸಂದರ್ಭದಲ್ಲಿ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ನಿಷ್ಟಿ ರುದ್ರಪ್ಪ, ಸಮ್ಮೇಳನದ ಅಧ್ಯಕ್ಷ ಡಾ.ಅರವಿಂದ ಪಾಟೀಲ್, ಪರಿಷತ್ತಿನ ಮುಖಂಡರುಗಳಾದ ಡಾ.ಶಿವಲಿಂಗಪ್ಪ ಹಂದ್ಯಾಳ್, ಚೋರನೂರು ಕೊಟ್ರಪ್ಪ, ಸಿದ್ರಾಮೇಶ್ವರಗೌಡ, ಡಾ.ಗದಗಿನ, ಬಸವತಾಜ್ ಬಿಸಿಲಹಳ್ಳಿ, ಎಸ್.ಮಲ್ಲನಗೌಡ, ಲಕ್ಷ್ಮೀ ಪವನ್ ಕುಮಾರ್ ಮೊದಲಾದವರು ಪಾಲ್ಗೊಂಡಿದ್ದರು