ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಕಾರ್ಯಾಧ್ಯಕ್ಷರಾಗಿ ಬೋಯಪಾಟಿ ವಿಷ್ಣುವರ್ಧನ ನೇಮಕ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.22: ನಗರದ ಬೋಯಪಾಟಿ  ವಿಷ್ಣುವರ್ಧನ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷನನ್ನಾಗಿ ನೇಮಕಮಾಡಿ ಆದೇಶಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಸೆಕ್ರೆಟರಿ ಶ್ರೀಧರ್ ಬಾಬು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜೆ.ಎಸ್. ಆಂಜನೇಯಲು ಅವರು ಹಾಗೂ ಬಳ್ಳಾರಿ ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರ ಸಹಕಾರದೊಂದಿಗೆ ನನ್ನನ್ನು ನೇಮಕ ಮಾಡಿ ಈ ಜವಾಬ್ದಾರಿ ನೀಡಲಾಗಿದ್ದು. ಪಕ್ಷದಲ್ಲಿ ಮತ್ತಷ್ಟು ಸೇವೆ ಸಲ್ಲಿಸಲು ಇದೊಂದು ಉತ್ತಮ ಅವಕಾಶವಾಗಿದ್ದು. ಪ್ರಸಕ್ತ ಚುನಾವಣೆಯಲ್ಲಿ ನಗರ ಮತ್ತು ಗ್ರಾಮೀಣ ಅಭ್ಯರ್ಥಿಗಳ ಗೆಲುವೆಗೆ ಹಗಲು ರಾತ್ರಿ ಶ್ರಮಿಸುವುದಾಗಿ ಹೇಳಿದ್ದಾರೆ ಬೋಯಪಾಟಿ.