ಬಳ್ಳಾರಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ: ಆನಂದ್ ಸಿಂಗ್

ಬಳ್ಳಾರಿ ಮಾ 30 : ಮುಂದಿನ‌ ತಿಂಗಳು ನಡೆಯುವ ಇಲ್ಲಿನ ಮಹಾ ನಗರ ಪಾಲಿಕೆಯ ಚುನಾವಣೆ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಎರೆಡು ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆಂಬ ವಿಶ್ವಾಸವನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಅವರು‌ ಇಂದು ನಗರದ ವಿಮ್ಸ್ ಆಸ್ಪತ್ರೆಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಸಾಮಾನ್ಯವಾಗಿ ಯಾವ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿ ಇರುತ್ತದೆಯೋ ಆ ಪಕ್ಷದ ಅಭ್ಯರ್ಥಿಗಳು ಗೆಲ್ಲೋದಕ್ಕೆ ಸಹಕಾರಿಯಾಗಲಿದೆ. ಹಾಗಾಗಿ ಬಿಜೆಪಿ ಅಭ್ಯರ್ಥಿಗಳು ನಿರಾಯಾಸವಾಗಿ ಗೆಲ್ಲುತ್ತಾರೆಂದರು.
ಅದೇರೀತಿ ಬಳ್ಳಾರಿ ಪಾಲಿಕೆಯ ಚುನಾವಣೆಯ ಫಲಿತಾಂಶವೂ ಆಗಲಿದೆ. ಸ್ಪರ್ಧಾ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ.
ಚುನಾವಣೆ ವಿಚಾರವಾಗಿ ಸಭೆ ಮಾಡೋ ಮೂಲಕ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಇದೆಲ್ಲವನ್ನೂ ನಗರ ಶಾಸಕ ಸೋಮಶೇಖರ ರೆಡ್ಡಿ ನೋಡಿಕೊಳ್ಳುತ್ತಾರೆಂದರು.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಆದಷ್ಟು ಶೀಘ್ರ ಉದ್ಘಾಟನೆಗೆ ವ್ಯವಸ್ಥೆ ಮಾಡಲಿದೆಂದರು.
ಈ ಸಂದರ್ಭದಲ್ಲಿ ಹರಪನಹಳ್ಳಿ ಶಾಸಕ‌ ಗಾಲಿ ಕರುಣಾಕರ ರೆಡ್ಡಿ, ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ಮೊದಲಾದವರು ಇದ್ದರು