ಬಸನಗೌಡ ದದ್ದಲ್‌ಗೆ ಸಚಿವ ಸ್ಥಾನ ನೀಡಿ

ರಾಯಚೂರು,ಮೇ.೧೯- ಗ್ರಾಮೀಣ ಕ್ಷೇತ್ರದಿಂದ ಸತತವಾಗಿ ಎರಡನೇ ಬಾರಿಗೆ ಜಯಗಳಿಸಿ ದಾಖಲೆ ಬರೆದಿರುವ ಬಸನಗೌಡ ದದ್ದಲ್ ಅವರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ದೇವಸುಗೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಶಂಕರ್ ಪಾಟೀಲ್ ಹಾಗೂ ದೇವಸುಗೂರು ಗ್ರಾಮ ಪಂಚಾಯತಿಯ ಸದಸ್ಯರಾದ ನರಸರೆಡ್ಡಿ ನಾಯಕ ಪತ್ರಿಕಾ ಪ್ರಕಟಣೆಯ ಮೂಲಕ ಒತ್ತಾಯಿಸಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಹಿಂದುಳಿದ ಕ್ಷೇತ್ರವಾಗಿರುವ ಗ್ರಾಮೀಣ ಕ್ಷೇತ್ರಕ್ಕೆ ಸಚಿವ ಸ್ಥಾನ ನೀಡಿದರೆ ಕ್ಷೇತ್ರ ಅಭಿವೃದ್ಧಿಯಾಗುತ್ತದೆ. ಸಮಗ್ರ ನೀರಾವರಿ ಯೋಜನೆ ಪೂರ್ಣಗೊಳ್ಳುತ್ತದೆ, ಆದ್ದರಿಂದ ಹಾಲಿ ಶಾಸಕರಾಗಿರುವ ಬಸನಗೌಡ ದದ್ದಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯ ಮಾಡಿದರು.