ಬಸನಗೌಡ ದದ್ದಲ್ ನಾಮಪತ್ರ ಸಲ್ಲಿಕೆ


ರಾಯಚೂರು,ಏ.೧೩, ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಇಂದು ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ದದ್ದಲ್ ಅವರು ನಾಮಪತ್ರ ಸಲ್ಲಿಸಿದರು.
ಅವರಿಂದು ನಗರದ ತಹಸೀಲ್ದಾರ್ ಕಚೇರಿಯಲ್ಲಿ ಚುನಾವಣೆ ಅಧಿಕಾರಿಗಳಿಗೆ ನಾಮ ಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಪಕ್ಷದ ಮುಖಂಡರು, ಬೆಂಬಲಿಗರು ಮತ್ತು ಕಾರ್ಯಕರ್ತರು ದದ್ದಲ್ ಸಾಥ್ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ದದ್ದಲ್ ಮಾತನಾಡುತ್ತಾ,ಸಾಂಕೇತಿಕವಾಗಿ ಒಂದು ನಾಮಪತ್ರ ಸಲ್ಲಿಸಿದು ಮೂರು ನಾಲ್ಕು ದಿನಗಳಲ್ಲಿ ರಾಜ್ಯ ಮುಖಂಡರು ಜಿಲ್ಲಾ ಮುಖಂಡರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಮತ್ತೋಂದು ನಾಮ ಪತ್ರ ಸಲ್ಲಿಸಲಾಗುವುದು ಎಂದರು.
ಐದು ವರ್ಷ ಶಾಸಕರಾಗಿದ್ದಾಗ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿ ಪರ ಕೆಲಸ ಮಾಡಿದ್ದೇನೆ. ಗ್ರಾಮೀಣ ಜನರ ಜ್ವಾಲಾಂತ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಿ, ಜನರ ದನಿಯಾಗಿ ಕೆಲಸ ಮಾಡಿದ್ದೇನೆ ಎಂದರು. ಮತ್ತೊಮ್ಮೆ ಕ್ಷೇತ್ರದ ಜನ ನನ್ನನ್ನು ಗೆಲ್ಲಿಸಿ ಆಶೀರ್ವಾದಿಸಬೇಕೆಂದು ಮನವರಿಕೆ ಮಾಡಿದರು.
ಈ ಸಂದರ್ಭದಲ್ಲಿ ಗಿಲ್ಲೇಸೂಗುರ ಬ್ಲಾಕ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ನಾಗೇಂದ್ರಪ್ಪ ಮಟಮಾರಿ,ಜಾವಿದ ಪಟೇಲ್, ರಾಜಶೇಖರ ರಂಗ, ಬಸವರಾಜ ವಕೀಲ್,ಪಕ್ಷದ ಕಾರ್ಯಕರ್ತರು ಬೆಂಬಲಗರು ಸೇರಿದಂತೆ ಉಪಸ್ಥಿತರಿದ್ದರು.