ಬಸವಕಲ್ಯಾಣದಲ್ಲಿ ಸಲಗರ ಗೆಲುವು ನಿಶ್ಚಿತ : ಅಷ್ಟಗಿ

ಕಲಬುರಗಿ,ಏ.16: ನಾಳೆ ನಡೆಯಲಿರುವ ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿಯ ಶರಣು ಸಲಗರ ಅವರ ಗೆಲುವು ನಿಶ್ಚಿತವಾಗಿದೆ ಎಂದು ಬಿಜೆಪಿ
ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಟಗಿ ಹೇಳಿದ್ದಾರೆ.

ಕಳೆದ ಹಲವು ದಿನಗಳಿಂದ ಬಸವಕಲ್ಯಾಣ ಕ್ಷೇತ್ರದಾದ್ಯಂತ ಪಕ್ಷದ ಅಭ್ಯರ್ಥಿ ಶರಣು ಸಲಗರ ಪರ ಚುನಾವಣಾ ಪ್ರಚಾರ ನಡೆಸಿದ್ದರ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಹಿಂದೊಮ್ಮೆ ಜೆಡಿಎಸ್ ನ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿಯ ಕಮಲ ಅರಳಲಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಅಭ್ಯರ್ಥಿಗೆ ವರವಾಗಿ ಪರಿಣಮಿಸಲಿವೆ. ಮೇಲಾಗಿ ಶರಣು ಸಲಗರ ಅವರು, ಲಾಕ್ ಡೌನ್ ವೇಳೆಯಲ್ಲಿ ಕ್ಷೇತ್ರದಾದ್ಯಂತ ಬಡವರಿಗೆ, ನಿರ್ಗತಿಕರಿಗೆ ಸಾಕಷ್ಟು ಪ್ರಮಾಣದಲ್ಲಿ ಸಹಾಯ ಮಾಡಿರುವುದು ಕೂಡ ಸಲಗರ್ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಬಸವಕಲ್ಯಾಣ ಕ್ಷೇತ್ರದಲ್ಲಿಯೇ ಮನೆ ಮಾಡಿ ಅಲ್ಲಿನ ಜನರ ಮನಗೆದ್ದಿರುವ ಶರಣು ಸಲಗರ ಅಲ್ಲಿಯ ಮನೆ ಮಗನಾಗಿ ಗುರುತಿಸಿಕೊಂಡಿದ್ದಾರೆ ಎಂದು ನುಡಿದರು. ಪಕ್ಷದ ಮುಖಂಡರು, ಮುಖ್ಯಮಂತ್ರಿಗಳು,ಸಚಿವರು ಹಾಗೂ ಕಾರ್ಯಕರ್ತರ ಶ್ರಮದಿಂದಾಗಿ ಶರಣು ಸಲಗರ ಅವರ ಗೆಲುವು ನಿಶ್ಚಿತ ಎಂದು ಅವರು ಅಂಬಾರಾಯ ಅಷ್ಠಗಿ ತಿಳಿಸಿದ್ದಾರೆ.