ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ: ಮದ್ಯಮಾರಾಟ ನಿಷೇಧ

ಕಲಬುರಗಿ.ಏ.05:ಬೀದರ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆ-2021ರ ಹಿನ್ನೆಲೆಯಲ್ಲಿ 2021ರ ಏಪ್ರಿಲ್ 17 ರಂದು ಮತದಾನ ನಡೆಯಲಿದೆ. ಈ ಉಪ ಚುನಾವಣೆ ಸಂದರ್ಭದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಬಸವಕಲ್ಯಾಣ ವಿಧಾನಸಭೆ ವ್ಯಾಪ್ತಿಯ 5 ಕಿ.ಮೀ. ವರೆಗೆ ಬರುವ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ವಿ.ಕೆ. ಸಲಗರ ಹಾಗೂ ಅಂಬಲಗಾ ಗ್ರಾಮಗಳಲ್ಲಿ 2021ರ ಏಪ್ರಿಲ್ 15 ರ ಸಂಜೆ 7 ಗಂಟೆಯಿಂದ ಏಪ್ರಿಲ್ 17ರವರೆಗೆ ಸಂಜೆ 7 ಗಂಟೆಯವರೆಗೆ ಎಲ್ಲಾ ತರಹದ ಮದ್ಯ ಮಾರಾಟ ನಿಷೇಧಿಸಿ ಹಾಗೂ ಅಂಗಡಿಗಳನ್ನು ಮುಚ್ಚಬೇಕೆಂದು ಕಲಬುರಗಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ವಿ.ವಿ. ಜ್ಯೋತ್ಸ್ನಾ ಅವರು ಸೋಮವಾರ ಅದೇಶ ಹೊರಡಿಸಿದ್ದಾರೆ.