ಬಸವಣ್ಣನವರ ಜಯಂತಿಯನ್ನು ಸರಳವಾಗಿಆಚರಿಸೋಣ: ಗೋವಿಂದರೆಡ್ಡಿ

ಬೀದರ. ಮೇ. 05: ಲೋಕಸಭಾ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಮೇ. 10 ರಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸೋಣ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲಾಡಳಿತ ಬೀದರ ವತಿಯಿಂದ ಮೇ. 10 ರಂದು ಬೆಳಿಗ್ಗೆ 8:30ಕ್ಕೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ನಂತರ 9 ಗಂಟೆಗೆ ಬೀದರ ನಗರದಲ್ಲಿರುವ ಬಸವಣ್ಣನವರ ಪುತ್ಥಳಿಗೆ ತೆರಳಿ ಪುಷ್ಪನಮನ ಸಲ್ಲಿಸಲಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಅವರು ಮಾತನಾಡಿ, ಬಸವಣ್ಣನವರ ಜಯಂತಿಯನ್ನು ಜಿಲ್ಲೆಯಲ್ಲಿ ಎಲ್ಲರೂ ಸೇರಿ ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಣೆ ಮಾಡಬೇಕು ಹಾಗೂ ಅಂದು ಎಲ್ಲಾ ಸರಕಾರಿ ಕಛೇರಿ ಹಾಗೂ ಶಾಲಾ- ಕಾಲೇಜುಗಳಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕೆಂದು ಹೇಳಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಸಮಾಜದ ಮುಖಂಡರಾ ರೇವಣಸಿದ್ದಪ್ಪ ಜಲಾದೆ, ಬಸವರಾಜ ಧನ್ನೂರ, ಸುರೇಶ ಚನ್ನಶೆಟ್ಟಿ, ರಾಜೇಂದ್ರ ಕುಮಾರ ಗಂಧಗೆ, ಶಿವಶಂಕರ್ ಟೋಕರೆ, ರಮೇಶ ಪಾಟೀಲ ಸೋಲಪುರ, ಬಾಬುವಾಲಿ, ವಿರೂಪಾಕ್ಷ ಗಾದಗಿ, ಸಂತೋಷ ಜೊಳದಪಾಕೆ ಸೇರಿದಂತೆ ಇತರರು ಉಪಸ್ಥಿತರಿದ್ದರು.