
ಬೆಂಗಳೂರು: ಏ.೨೩. ಸಮಾಜದ ಮೌಢ್ಯತೆಯನ್ನು ಕಿತ್ತೊಗೆಯಲು ಸಾಮಾಜಿಕ ಕ್ರಾಂತಿ ಮಾಡಿ, ವಚನಗಳ ಮೂಲಕ ಮಾನವೀಯ ಮೌಲ್ಯಗಳನ್ನು ಸಾರಿದ ವಿಶ್ವಗುರು ಬಸವಣ್ಣ. ಬಸವಣ್ಣನವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಬಸವ ಜಯಂತಿಯ ಪ್ರಯುಕ್ತ ಇಂದು, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಮೈಸೂರ್ ಸ್ಯಾಂಡಲ್ ಸೋಪ್ ಕಾರ್ಖಾನೆ ಬಳಿ, ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ, ಅವರು ಮಾತನಾಡಿದರು.
ದಯವೇ ಧರ್ಮದ ಮೂಲವಯ್ಯ ಎಂಬ ಸಾರವನ್ನು ಸಾರಿದ ಬಸವಣ್ಣನವರ ಜೀವನದ ಸಂದೇಶವನ್ನು ಇಂದಿನ ಯುವಜನತೆ ಅರಿತುಕೊಳ್ಳಬೇಕು. ಜೊತೆಗೆ ಬಸವಣ್ಣನವರ ವಚನಗಳನ್ನು ಹೆಚ್ಚು ಹೆಚ್ಚು ಅಧ್ಯಯನ ಮಾಡುವಂತಹ ಉತ್ತಮ ಕಾರ್ಯದಲ್ಲಿ ತೊಡಗಿಸಿಕೊಳ್ಳಿ ಎಂದು ಹೇಳಿದರು.
ಇದೇ ವೇಳೆ ಒಬಿಸಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ನೆಲ ನರೇಂದ್ರಬಾಬು, ಮಾಜಿ ಉಪಮೇಯರ್ ಎಸ್.ಹರೀಶ್, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಅವೀನ್ ಆರಾಧ್ಯ ಡಾ.ಗಿರೀಶ್ ನಾಶಿ, ರೇಣುಕ ಆರಾಧ್ಯ, ಗಂಗನಹನುಮಯ್ಯ, ಪ್ರಸನ್ನ, ರಾಘವೇಂದ್ರ ನಾಗರಾಜ್, ಶಿವಾನಂದಮೂರ್ತಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.