ಬಸವನಗರದಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ

ಬೀದರ:ಮೇ.2: ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ, ಅಖಿಲ ಭಾರತ ವಿಶ್ವವಿದ್ಯಾಲಯಗಳ ನೌಕರರ ಒಕ್ಕೂಟ ಹಾಗೂ ಪ್ರಗತಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಇಂದು ಬೆಳಿಗ್ಗೆ ಬಸವನಗರದಲ್ಲಿ ಕಟ್ಟಡ ಕಾರ್ಮಿಕರಿಗೆ ಮಾಸ್ಕ ಹಾಗೂ ಸ್ಯಾನಿಟೈಸರ್ ಗಳನ್ನು ವಿತರಿಸಲಾಯಿತು.

ಪಶುವೈದೃಕೀಯ ವಿಶ್ವವಿದ್ಯಾಲಯದ ನಿವೃತ್ತ ಉಪಹಣಕಾಸು ನಿಯಂತ್ರಣಾಧಿಕಾರಿ ಯಾದ ಶ್ರೀ ವೀರಭದ್ರಪ್ಪ ಉಪ್ಪಿನ್ ರವರು ಮಾತನಾಡಿ, ದೈನಂದಿನ ಕೆಲಸ ಮುಗಿಸಿದ ಮೇಲೆ ಕಡ್ಡಾಯವಾಗಿ ಮಾಸ್ಕ ಧರಿಸುವುದು ಹಾಗೂ ಸಾಬೂನಿನಿಂದ ಕೈಗಳನ್ನು ತೊಳೆದು ಕೊಳ್ಳುವುದು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಕೊರೋನಾ ಸೋಂಕು ತಾಗದಂತೆ ಹಾಗೂ ಹರಡದಂತೆ ನೋಡಿಕೊಳ್ಳಬೇಕು ಎಂದು ಕಾರ್ಮಿಕರಿಗೆ ಕರೆ ನೀಡಿದರು.

ಪ್ರಗತಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಅರವಿಂದ ಕುಲಕರ್ಣಿ ಯವರು ಮಾತನಾಡುತ್ತ, ಕಾರ್ಮಿಕರು ಶ್ರಮಜೀವಿಗಳು ಅವರು ನಿಜವಾದ ಅರ್ಥದಲ್ಲಿ ರಾಷ್ಟ್ರ ನಿರ್ಮಾಣ ಮಾಡುವವರು. ಪರಿಶ್ರಮ ಪಡುವ ಇವರ ದೇಹದಲ್ಲಿ ರೋಗ-ನಿರೋಧಕ ಶಕ್ತಿ ಹೆಚ್ಚಾಗಿರುವ ಕಾರಣ ಕೊರೋನಾ ಸೋಂಕು ಹರಡುವ ಸಂಭವ ತೀರಾ ಕಡಿಮೆ. ಆದಾಗ್ಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಿದೆ ಎಂದು ನುಡಿದರು.

ಅಶೋಕ್, ಶೇಕಮ, ಹಣಮಂತ, ಚಾಂದಕುಮಾರ್, ದಶರಥ್, ಪ್ರವೀಣ್, ರಾಜು, ಆಕಾಶ್, ಪ್ರೀತಿ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.