ಬಸವನಗುಡಿ ನಿವಾಸದಲ್ಲಿ ಸ್ಥಳ ಮಹಜರು

ಬೆಂಗಳೂರು, ಮೇ ೬- ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿಯಲ್ಲಿರುವ ಹೆಚ್.ಡಿ. ರೇವಣ್ಣ ನಿವಾಸಕ್ಕೆ ಲೈಂಗಿಕ ದೌರ್ಜನ್ಯ ನೀಡಿದ್ದ ಸಂತ್ರಸ್ತೆಯನ್ನು ಹೊರ ತಂದು ಎಸ್‌ಐಟಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.
ಇಂದು ಬೆಳಿಗ್ಗೆ ರೇವಣ್ಣ ಅವರ ನಿವಾಸಕ್ಕೆ ನಾಲ್ವರು ಮಹಿಳಾ ಅಧಿಕಾರಿಗಳು ಸೇರಿದಂತೆ ೬ ಮಂದಿ ಅಧಿಕಾರಿಗಳ ತಂಡದೊಂದಿಗೆ ಆಗಮಿಸಿ, ಸಂತ್ರಸ್ತೆಯ ಹೇಳಿಕೆ ಸೇರಿದಂತೆ ಎಲ್ಲ ರೀತಿಯ ಮಹಜರು ಪ್ರಕ್ರಿಯೆಯನ್ನು ಚಿತ್ರೀಕರಣ ಮಾಡಲಾಯಿತು.
ಮಹಜರು ನಡೆಸುವ ಮುನ್ನ ಮುನ್ನೇಚ್ಚರಿಕೆ ಕ್ರಮವಾಗಿ ರೇವಣ್ಣ ನಿವಾಸದ ಸುತ್ತ ಬ್ಯಾರಿಕೇಡ್ ಅಳವಡಿಸಿ ಬಸವನಗುಡಿಯ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ.
ರೇವಣ್ಣ ತಮ್ಮ ಕೊಠಡಿಗೆ ಬರುವಂತೆ ಆಹ್ವಾನಿಸಿ ಹಣ್ಣು ಕೊಡುವ ನೆಪದಲ್ಲಿ ಮೈ ಮುಟ್ಟುತ್ತಿದ್ದರು. ಮನೆಯ ಸ್ಟೋರ್ ರೂಂನಲ್ಲಿ ಕೈ ಹಿಡಿದು ಎಳೆಯುತ್ತಿದ್ದರು. ಸೀರೆಯ ಪಿನ್ ಕಿತ್ತು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಮಹಿಳೆ ದೂರು ನೀಡಿದ್ದರು.
ತನ್ನ ಮಗಳ ಫೋನ್ ಗೆ ಹಲವು ಭಾರಿ ಪ್ರಜ್ವಲ್ ರೇವಣ್ಣ ವಿಡಿಯೋ ಕಾಲ್ ಮಾಡಿ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದಿಸಲು ಯತ್ನಿಸಿದ್ದರು ಮಹಿಳೆ ಆರೋಪಿಸಿದರು. ಈ ದೂರಿನ ಆಧಾರದ ಮೇಲೆ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಸೆಕ್ಷನ್ ಅಡಿ ಹೊಳೆನರಸೀಪುರದಲ್ಲಿ ಪ್ರಕರಣ ದಾಖಲಾಗಿತ್ತು.