ಬಸವನಗೌಡ ತುರ್ವಿಹಾಳ ಶಾಸಕರಾಗಿ ಪ್ರಮಾಣ ವಚನ

ರಾಯಚೂರು.ಜೂ.೦೮- ಮಸ್ಕಿ ಶಾಸಕ ಬಸವನಗೌಡ ತುರ್ವಿಹಾಳ ಅವರು ಇಂದು ಸಭಾಪತಿಗಳಾದ ವಿಶ್ವಶ್ವೇರಯ್ಯ ಕಾಗೇರಿ ಹೆಗಡೆ ಅವರ ಸಮ್ಮುಖದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಏ.೧೭ ರಂದು ಮಸ್ಕಿ ವಿಧಾನಸಭೆಗೆ ಉಪ ಚುನಾವಣೆ ನಡೆದಿತ್ತು. ಕೊರೊನಾ ಹಿನ್ನೆಲೆಯಲ್ಲಿ ಪ್ರಮಾಣ ವಚನ ವಿಳಂಬಕ್ಕೆ ಕಾರಣವಾಗಿತ್ತು. ರಾಜ್ಯದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನಸಭೆಗಳಿಗೆ ಉಪ ಚುನಾವಣೆ ನಡೆದಿದ್ದವು. ಮೇ.೨ ರಂದು ಫಲಿತಾಂಶ ಪ್ರಕಟಗೊಂಡಿತು. ಸುಮಾರು ೩೫ ದಿನಗಳ ನಂತರ ಬಸವನಗೌಡ ತುರ್ವಿಹಾಳ ಅವರು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸ್ವೀಕರಿಸಿದ ನಂತರ ಕೆಪಿಸಿಸಿ ಕಛೇರಿಯಲ್ಲಿ ನೂತನ ಶಾಸಕರಿಗೆ ಸನ್ಮಾನ ಮಾಡಲಾಯಿತು. .
ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಎನ್. ಎಸ್. ಬೋಸರಾಜು, ಮಾಜಿ ಸಂಸದರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ. ನಾಯಕ, ಲಿಂಗಸೂಗೂರು ಶಾಸಕ ಡಿ.ಎಸ್.ಹೂಲಗೇರಿ, ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಕುಷ್ಟಗಿ ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶರಣಪ್ಪ ಮಟ್ಟೂರು, ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಪಾಟೀಲ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಬಸನಗೌಡ ಬಾದರ್ಲಿ, ಕಾಂಗ್ರೆಸ್ ಮುಖಂಡರಾದ ಕರಿಯಪ್ಪ ಸಿಂಧನೂರ ಹಾಗೂ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.