ಬಸವರಾಜ ಮೊಳಕೀರೆಗೆ ಕಲ್ಯಾಣ ಕರ್ನಾಟಕ ಎಜುಕೇಶನ್ ಐಕಾನ್ ಪ್ರಶಸ್ತಿ ಪ್ರದಾನ

ಭಾಲ್ಕಿ:ಸೆ.6:ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಬಸವರಾಜ ಮೊಳಕೀರೆ ಅವರಿಗೆ ಕಲ್ಯಾಣ ಕರ್ನಾಟಕ ಎಜುಕೇಶನ್ ಐಕಾನ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬೀದರ್ ನಗರದ ಝೀರಾ ಕನ್ವೆನ್ಷನ್ ಹಾಲ್‍ನಲ್ಲಿ ಮಂಗಳವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರೀ ನಾನಕ ಝೀರಾ ಸಾಹೀಬ್ ಫೌಂಡೇಶನ್ ವತಿಯಿಂದ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಡಾ.ಸಿ.ಮನೋಹರ, ಫೌಂಡೇಶನ್ ಅಧ್ಯಕ್ಷ ಡಾ.ಎಸ್.ಬಲಬೀರಸಿಂಗ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಡಾ.ರೇಷ್ಮಾ ಕೌರ್, ಪ್ರೋ.ಬಿ.ಜಿ.ಮೂಲಿಮನಿ ಸೇರಿದಂತೆ ಹಲವರು ಇದ್ದರು.