ಬಸವಾಪುರದಲ್ಲಿ ಕೋವಿಡ್-19 ತಡೆ ಅರಿವಿಗೆ ಸೈಕಲ್ ಜಾಥಾ

ಚಾಮರಾಜನಗರ, ನ.03: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾಧನ ಸಂಸ್ಥೆ, ಯುವ ಸ್ಪಂದನ ಕೇಂದ್ರ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಗ್ರಾಮೀಣಾಭಿವೃದ್ದಿ ಸಂಘದ ಸಹಯೋಗದಲ್ಲಿ ಇಂದು ಸಂವಿಧಾನ ಜಾಗೃತಿ ಅಭಿಯಾನ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸುವ ಮತ್ತು ಕೊರೊನಾ ಹರಡುವುದನ್ನು ತಡೆಗಟ್ಟುವ ಕುರಿತು ಸೈಕಲ್ ಜಾಥಾ ಕಾರ್ಯಕ್ರಮವನ್ನು ಚಾಮರಾಜನಗರ ತಾಲ್ಲೂಕಿನ ಬಸವಾಪುರ ಗ್ರಾಮದಲ್ಲಿ ನಡೆಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಜಿ. ವಿಶಾಲಾಕ್ಷಿ ಅವರು ಪ್ರತಿಜ್ಞಾವಿಧಿ ಭೋದಿಸಿ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಭಾರತದ ಸಂವಿಧಾನ ಬಹಳ ಶ್ರೇಷ್ಠವಾದ ಸಂವಿಧಾನವಾಗಿದೆ. ಡಾ.ಬಿ.ಆರ್. ಅಂಬೇಡ್ಕರ್ ರವರ ಪರಿಶ್ರಮದ ಫಲವಾಗಿ ದೇಶಕ್ಕೆ ಅದ್ಬುತವಾದ ಸಂವಿಧಾನ ದೊರಕಿದೆ. ಸಂವಿಧಾನದ ಬಗ್ಗೆ ಪ್ರತಿಯೊಬ್ಬರು ಜಾÐನ ಹೊಂದಬೇಕು ಎಂದರು.
ಭಾರತದಲ್ಲಿ ಹಲವು ಧರ್ಮ, ಜಾತಿ, ಸಂಸ್ಕøತಿ ಜನ ಒಟ್ಟಾಗಿ ಬದುಕುತ್ತಿರುವುದರಿಂದ ಯಾವುದೇ ತಾರತಮ್ಯ ಇಲ್ಲದೇ ಸರ್ವ ಧರ್ಮ ಸಮನ್ವಯ ತತ್ವದ ಅಡಿಯಲ್ಲಿ ಸಂವಿಧಾನವನ್ನು ರಚಿಸಲಾಗಿದೆ. ನಾವೆಲ್ಲಾ ಭಾರತೀಯರು ಏಕತೆ, ಸಮಗ್ರತೆ ಮೂಲಕ ಒಂದಾಗಿ ಜೀವಿಸುವುದರ ಮೂಲಕ ಸಂವಿಧಾನಕ್ಕೆ ಗೌರವ ನೀಡಿದಂತಾಗುತ್ತದೆ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಕೊರೊನಾ ಬಹಳ ವೇಗವಾಗಿ ಹರಡುತ್ತಿರುವುದಿಂದ ಪ್ರತಿಯೊಬ್ಬರು ತಪ್ಪದೇ ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಜರ್ ಬಳಕೆ ಮಾಡಿ ಕೊರೊನದಿಂದ ಮುಕ್ತರಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಶಾಲಾಕ್ಷಿ ಅವರು ತಿಳಿಸಿದರು.
ಜಿಪಂ ಸದಸ್ಯ ರಮೇಶ್ ಮಾತನಾಡಿ, ಸಂವಿಧಾನ ಮತ್ತು ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಬಹಳ ಒಳ್ಳೆಯ ಕೆಲಸವಾಗಿದೆ. ನಮ್ಮ ಗ್ರಾಮದಲ್ಲಿ ಸಂವಿಧಾನದ ಬಗ್ಗೆ ಮಾಹಿತಿ ನೀಡುತ್ತಿರುವುದು ನಮ್ಮೆಲರ ಸೌಭಾಗ್ಯ . ಕೋವಿಡ್ ಬಗ್ಗೆ ಪ್ರತಿಯೊಬ್ಬರು ಜಾಗೃತರಾಗಿಬೇಕೆಂದು ಹೇಳಿದರು.
ಸಾಧನ ಸಂಸ್ಥೆಯ ನಿರ್ದೆಶಕ ಟಿ.ಜೆ. ಸುರೇಶ್ ರವರು ಮಾತನಾಡಿ, ಡಾ|| ಬಿ.ಆರ್. ಅಂಬೇಡ್ಕರ್ ರವರು ರಾಷ್ಟ್ರದ ಆಸ್ತಿಯಾಗಿದ್ದು, ಎಲ್ಲಾ ಜನಾಂಗದ ಏಳಿಗೆಗಾಗಿ ರಚಿಸಿರುವ ಸಂವಿಧಾನವು ರಕ್ಷಾ ಕವಚವಾಗಿದೆ. ಪ್ರತಿಯೊಬ್ಬರು ಸಂವಿಧಾನದ ಮಹತ್ವವನ್ನು ತಿಳಿದುಕೊಳ್ಳಬೇಕು ಎಂದು ಸಲಹೆ ಮಾಡಿದರು.
ಇದೇ ಸಮಯದಲ್ಲಿ ಗ್ರಾಮದ ಜನರಿಗೆ ಮಾಸ್ಕ್ ಗಳನ್ನು ವಿತರಿಸಲಾಯಿತು. ಮಾರಮ್ಮನ ದೇವಾಲಯದಿಂದ ಆರಂಭಗೊಂಡ ಸೈಕಲ್ ಜಾಥಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿತು. ಈ ವೇಳೆ ಕೋವಿಡ್ ಜಾಗೃತಿ ಘೋಷಣೆಗಳನ್ನು ಮೊಳಗಿಸಲಾಯಿತು.
ಡಾ|| ಬಿ.ಆರ್. ಅಂಬೇಡ್ಕರ್ ಗ್ರಾಮಿಣಾಭಿವೃದ್ದಿ ಸಂಘದ ಅಧ್ಯಕ್ಷರಾದ ಬಸವಣ್ಣ, ಶೇಖರ್, ಶಿವಣ್ಣ, ಮಹೇಶ್, ಬ.ಮ.ಕೃಷ್ಣಮೂರ್ತಿ, ಪಿ. ನಾಗರಾಜು, ರಂಗಸ್ವಾಮಿ, ಯಜಮಾನರು, ಸಂಘದ ಸದಸ್ಯರುಗಳು, ಪದಾಧಿಕಾರಿಗಳು ಹಾಜರಿದ್ದರು.