ಬಸವೇಶ್ವರ ಆಸ್ಪತ್ರೆ ಆವರಣದಲ್ಲಿ ಸಸಿಗಳ ನೆಡುವ ಕಾರ್ಯಕ್ರಮ

ಸಂಜೆವಾಣಿ ವಾರ್ತೆ

ಚಿತ್ರದುರ್ಗ, ಜೂ. 5- ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠ, ಎಸ್.ಜೆ.ಎಂ. ವಿದ್ಯಾಪೀಠ, ಅರಣ್ಯ ಇಲಾಖೆ ಮತ್ತು ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಸಸಿ ನೆಡುವ ಸಪ್ತಾಹದ ಅಂಗವಾಗಿ ಬಸವೇಶ್ವರ ಆಸ್ಪತ್ರೆ ಆವರಣದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮ ನೆರವೇರಿತು.ಕಾರ್ಯಕ್ರಮದಲ್ಲಿ ಶ್ರೀಮಠ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಶ್ರೀ ಬಸವಪ್ರಭು ಸ್ವಾಮಿಗಳು, ಶ್ರೀ ಬಸವ ನಾಗಿದೇವ ಸ್ವಾಮಿಗಳು, ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮಿಗಳು, ಶ್ರೀ ಕೇತೇಶ್ವರ ಸ್ವಾಮಿಗಳು, ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಎಸ್.ಜೆ.ಎಂ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೌರಮ್ಮ, ನರ್ಸಿಂಗ್ ಕಾಲೇಜಿನ ಪ್ರಾಚಾರ್ಯರಾದ ಡಾ. ಸವಿತಾ, ನಾಗರಾಜ ಸಂಗA, ಎಂ.ಎಸ್.ಮೃತ್ಯುAಜಯ ಮೊದಲಾದವರು ಭಾಗವಹಿಸಿದ್ದರು.