ಬಸವೇಶ್ವರ ಭಾವಚಿತ್ರ ವಿತರಿಸಿದ ಬಸವರಾಜ್


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.24: ಬಸವೇಶ್ವರ ಜಯಂತಿ‌ ಅಂಗವಾಗಿ ನಿನ್ನೆ ಕರ್ನಾಟಕ ಇತಿಹಾಸ ಅಕಾಡೆಮಿ ಜಿಲ್ಲಾ ಅಧ್ಯಕ್ಷ ಟಿ.ಹೆಚ್.ಎಂ. ಬಸವರಾಜ್ ಅವರು ವಿಶ್ವಗುರು     ಬಸವೇಶ್ವರ ಅವರ ಭಾವಚಿತ್ರವನ್ನು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರಿಗೆ ನಗರದ ಗವಿಯಪ್ಪ ವೃತ್ತದ ಬಸವೇಶ್ವರ ಪುತ್ಥಳಿ ಬಳಿ  ನೀಡಿ ಸತ್ಕರಿಸಿದರು.
ಈ ಸಂದರ್ಭದಲ್ಲಿ ಎಸ್ಪಿ ರಂಜಿತ್ ಕುಮಾರ್ ಬಂಡಾರ್, ಕಸಾಪ ಜಿಲ್ಲಾ ಅಧ್ಯಕ್ಷ ನಿಷ್ಠಿ ರುದ್ರಪ್ಪ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಕನೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಬಾಬು ಮೊದಲಾದವರು ಇದ್ದರು.