ಬಸವ ಜಯಂತಿಯಲ್ಲಿ ಸೂರ್ಯಕಾಂತ್ ಭಾಗಿ

ಬೀದರ್:ಎ.24: ಇಲ್ಲಿನ ಹಾರೂರಗೇರಿಯ ಬಸವ ಸಮಿತಿ ಹಮ್ಮಿಕೊಂಡಿದ್ದ ವಿಶ್ವಗುರು ಬಸವಣ್ಣನವರ ಜಯಂತ್ಯುತ್ಸವದಲ್ಲಿ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೂರ್ಯಕಾಂತ್ ನಾಗಮಾರಪಳ್ಳಿ ಪಾಲ್ಗೊಂಡಿದ್ದರು. ಬಸವಣ್ಣನವರ ಕಾಯಕ, ದಾಸೋಹ ತತ್ವಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ಸಲಹೆ ನೀಡಿದರು. ಬಸವಾದಿ ಶರಣರ ಸಂದೇಶಗಳು ಮನುಕುಲಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು.
ಜಯಂತಿ ನಿಮಿತ್ತ ಬಸವೇಶ್ವರ ಭಾವಚಿತ್ರದ ಭವ್ಯ ಮೆರವಣಿಗೆ ಹಾಗೂ ಪಲ್ಲಕ್ಕಿ ಉತ್ಸವ ನಡೆಯಿತು. ಪ್ರಮುಖರಾದ ಬಸವರಾಜ ಪಾಟೀಲ್ ಹಾರೂರಗೇರಿ, ಹಾವಶೆಟ್ಟಿ ಪಾಟೀಲ್, ಆಕಾಶ ಪಾಟೀಲ್ ಮತ್ತು ಕಾಲೋನಿಯ ಹಿರಿಯರು, ಗಣ್ಯರು ಉಪಸ್ಥಿತರಿದ್ದರು.