ಬಸವ ಜಯಂತಿ ಉತ್ಸವ ಸಮಿತಿಗೆ ಗಂದಗೆ ಅಧ್ಯಕ್ಷ

ಬೀದರ್:ಎ.13: 2023ನೇ ಸಾಲಿನ ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷರಾಗಿ ರಾಜೇಂದ್ರಕುಮಾರ ಗಂದಗೆ ಆಯ್ಕೆಯಾಗಿದ್ದಾರೆ.
ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ನಡೆದ ಬಸವ ಜಯಂತಿ ಉತ್ಸವದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರನ್ನು ಸರ್ವಾನುಮದಿಂದ ಅವರನ್ನು ಆಯ್ಕೆ ಮಾಡಲಾಯಿತು.
ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ ಚನಶೆಟ್ಟಿ ಹಾಗೂ ಖಜಾಂಚಿಯಾಗಿ ಡಾ. ರಜನೀಶ್ ವಾಲಿ ಅವರನ್ನು ಆಯ್ಕೆ ಮಾಡಲಾಯಿತು.
ಏಪ್ರಿಲ್ 23 ರಂದು ನಗರದಲ್ಲಿ ಅದ್ಧೂರಿಯಾಗಿ ಬಸವ ಜಯಂತಿ ಆಚರಿಸಲು ಒಕ್ಕೊರಲಿನಿಂದ ತೀರ್ಮಾನಿಸಲಾಯಿತು.
ಹಿರಿಯ ಮುಖಂಡ ಶಿವಶರಣಪ್ಪ ವಾಲಿ ಅಧ್ಯಕ್ಷತೆ ವಹಿಸಿದ್ದರು. ಬಸವ ಜಯಂತಿ ಉತ್ಸವ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ, ಮುಖಂಡರಾದ ಚಂದ್ರಶೇಖರ ಪಾಟೀಲ ಗಾದಗಿ, ಬಸವರಾಜ ಧನ್ನೂರ, ಕುಶಾಲರಾವ್ ಪಾಟೀಲ ಖಾಜಾಪುರ, ದೀಪಕ್ ವಾಲಿ, ಸೋಮಶೇಖರ ಪಾಟೀಲ ಗಾದಗಿ, ಬಿ.ಜಿ. ಶೆಟಕಾರ್, ಶರಣಪ್ಪ ಮಿಠಾರೆ, ಶಶಿ ಹೊಸಳ್ಳಿ, ಅರುಣ ಹೋತಪೇಟ್, ಜಯರಾಜ ಖಂಡ್ರೆ, ಸಂಜೀವಕುಮಾರ ಪಾಟೀಲ ಮೊದಲಾದವರು ಇದ್ದರು.
ಏಪ್ರಿಲ್ 11 ರಂದು ಸಂಜೆ 6ಕ್ಕೆ ನಗರದ ಉದಗೀರ ರಸ್ತೆಯಲ್ಲಿ ಇರುವ ವಾಲಿ ಕಾಂಪ್ಲೆಕ್ಸ್‍ನಲ್ಲಿ ಬಸವ ಜಯಂತಿ ಉತ್ಸವ ಸಮಿತಿಯ ಕಚೇರಿ ಉದ್ಘಾಟನೆ ನೆರವೇರಲಿದೆ. ಬಸವ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬಸವ ಜಯಂತಿ ಉತ್ಸವ ಸಮಿತಿಯ ನೂತನ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮನವಿ ಮಾಡಿದ್ದಾರೆ.