ಬಸವ ಜಯಂತಿ: ಪೂರ್ವಭಾವಿ ಸಭೆ 7ಕ್ಕೆ

ಬೀದರ್:ಎ.5: ಏಪ್ರಿಲ್ 23ಕ್ಕೆ ನಗರದಲ್ಲಿ ಅದ್ಧೂರಿ ಬಸವ ಜಯಂತಿ ಆಚರಣೆಗೆ ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 7 ರಂದು ಸಂಜೆ 5ಕ್ಕೆ ಪೂರ್ವ ಭಾವಿ ಸಿದ್ಧತಾ ಸಭೆ ಕರೆಯಲಾಗಿದೆ ಎಂದು ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ ತಿಳಿಸಿದ್ದಾರೆ.

ಸಭೆಯಲ್ಲಿ ಅರ್ಥಪೂರ್ಣ ಬಸವ ಜಯಂತಿ ಆಚರಣೆ ಕುರಿತು ಚರ್ಚೆ ನಡೆಸಲಾಗುವುದು. 2023ನೇ ಸಾಲಿನ ಬಸವ ಜಯಂತಿ ಉತ್ಸವ ಸಮಿತಿಯ ಪದಾಧಿಕಾರಿಗಳನ್ನೂ ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಸಮಾಜದ ಮುಖಂಡರು, ಬಸವ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಬಸವಾನುಯಾಯಿಗಳು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಜಯಂತಿ ಯಶಸ್ವಿಗೆ ತಮ್ಮ ಸಲಹೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.