ಬಸವ ಜಯಂತಿ: 20ಕ್ಕೆ ಪೂರ್ವಭಾವಿ ಸಭೆ

ಬೀದರ್:ಏ.19: ಬಸವ ಜಯಂತಿ ಆಚರಣೆ ನಿಮಿತ್ತ ಇಲ್ಲಿಯ ಗಾಂಧಿಗಂಜನ ಬಸವೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 20 ರಂದು ಬೆಳಿಗ್ಗೆ 10ಕ್ಕೆ ಪೂರ್ವಭಾವಿ ಸಿದ್ಧತಾ ಸಭೆ ಕರೆಯಲಾಗಿದೆ ಎಂದು ಬಸವ ಜಯಂತಿ ಉತ್ಸವ ಸಮಿತಿಯ ನಿಕಟಪೂರ್ವ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದ್ದಾರೆ.
ಬಸವ ಜಯಂತಿ ಅದ್ಧೂರಿ ಹಾಗೂ ಅರ್ಥಪೂರ್ಣ ಆಚರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ಸಭೆಯಲ್ಲಿ 2024ನೇ ಸಾಲಿನ ಬಸವ ಜಯಂತಿ ಉತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಸಹ ನಡೆಯಲಿದೆ ಎಂದು ತಿಳಿಸಿದ್ದಾರೆ.
ಬಸವ ಪರ ಸಂಘಟನೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಬಸವಾನುಯಾಯಿಗಳು ಸಭೆಯಲ್ಲಿ ಪಾಲ್ಗೊಂಡು ತಮ್ಮ ಸಲಹೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.