ಬಸವ ಪ್ರಶಸ್ತಿಗೆ ಆಯ್ಕೆ

ವಿಜಯಪುರ,ಮೇ.6:ಹುಬ್ಬಳ್ಳಿಯ ಅಖಿಲ ಕರ್ನಾಟಕ ಬಸವ ಬಳಗ ಕೊಡ ಮಾಡುವ ಬಸವ ಪ್ರಶಸ್ತಿಗೆ ವಿಜಯಪುರದ ಕ್ರೀಡಾ ಸಾಧಕ ಬಸವರಾಜ ಬಾಗೇವಾಡಿ ಅವರು ಆಯ್ಕೆಯಾಗಿದ್ದಾರೆ.
ಬಸವರಾಜ ಬಾಗೇವಾಡಿ ಅವರು ಕ್ರೀಡಾ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮೇ 10ರಂದು ಹುಬ್ಬಳ್ಳಿಯ ಜಯಚಾಮರಾಜ ನಗರದಲ್ಲಿ ಶ್ರೀ ಬಸವೇಶ್ವರ ಜಯಂತೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಖಿಲ ಕರ್ನಾಟಕ ಬಸವ ಬಳಗ ಅಧ್ಯಕ್ಷ ಸದಾಶಿವ ಚೌಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.