ಬಸ್‍ಗಳ ಡಿಕ್ಕಿ: ಪ್ರಯಾಣಿಕರಿಗೆ ಗಾಯ

ಹುಬ್ಬಳ್ಳಿ,ಮೇ30: ತಾಂತ್ರಿಕ ದೋಷದಿಂದಾಗಿ ಸಾರಿಗೆ ಬಸ್ಸೊಂದು ಇನ್ನೊಂದು ಸಾರಿಗೆ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಮೂರನಾಲ್ಕು ಪ್ರಯಾಣಿಕರು ಗಾಯಗೊಂಡ ಘಟನೆ ನಗರದ ಗದಗ ರಸ್ತೆಯ ರೈಲ್ವೆ ವರ್ಕ್ ಶಾಪ್ ಬಳಿಯಲ್ಲಿ ಗುರುವಾರ ನಡೆದಿದೆ. ಗದಗದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ ತಾಂತ್ರಿಕ ದೋಷದಿಂದಾಗಿ ರಸ್ತೆ ಮಧ್ಯದಲ್ಲಿರುವ ಡಿವೈಡರ್‍ಗೆ ಡಿಕ್ಕಿ ಹೊಡೆದು, ಇನ್ನೊಂದು ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ಕೂಡಲೇ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಗೂ ಸಂಚಾರಿ ಠಾಣೆಯ ಪೆÇಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಇನ್ನು ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಗೊಂಡವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.