ಕಲಬುರಗಿ,ಏ.11-ರಸ್ತೆ ಬದಿಗೆ ನಿಂತಿದ್ದ ಬಸ್ಸಿಗೆ ಇನ್ನೊಂದು ಬಸ್ ಡಿಕ್ಕಿ ಹೊಡೆದು 10ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಸರಡಗಿ ಖಣಿ ಹತ್ತಿರ ಇಂದು ಬೆಳಿಗ್ಗೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡ ಎರಡೂ ಬಸ್‍ಗಳಲ್ಲಿನ ಪ್ರಯಾಣಿಕರನ್ನು ನಗರದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಬಸ್ ಕಲಬುರಗಿಯಿಂದ ವಿಜಯಪುರ ಕಡೆಗೆ, ಇನ್ನೊಂದು ಬಸ್ ವಿಜಪುರದಿಂದ ಕಲಬುರಗಿ ಕಡೆಗೆ ಹೊರಟಿತ್ತು ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಒಂದು ಬಸ್ಸಿನ ಮುಂಭಾಗ ನುಜ್ಜುಗುಜ್ಜಾಗಿದೆ. ಅದೃಷ್ಟ ವಶಾತ್ ಯಾವುದೇ ಜೀವಹಾನಿಯಾಗಿಲ್ಲ. ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದೆ.