ಬಸ್‌ಗೆ ಬೆಂಕಿ ೧೨ ಮಂದಿ ಸಜೀವ ದಹನ

ಗುಣ,ಡಿ.೨೮- ಮಧ್ಯಪ್ರದೇಶದ ಗುಣ ಜಿಲ್ಲೆಯಲ್ಲಿ ತಡರಾತ್ರಿ ಖಾಸಗಿ ಬಸ್ ಡಂಪರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಕನಿಷ್ಠ ೧೨ ಜನರು ಸಾವನ್ನಪ್ಪಿದ್ದ ೧೪ ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿರುವ ಘಟನೆ ಗುನಾ-ಆರೋನ್ ರಸ್ತೆಯಲ್ಲಿ ಸಂಭವಿಸಿದೆ.ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುಣ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ , ಅದರಲ್ಲಿ ತೀವ್ರವಾಗಿ ಸುಟ್ಟಗಾಯಗಳಾಗಿರುವ ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಎಂದು ಗುಣ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.ರಾತ್ರಿ ಅಪಘಾತ ಸಂಭವಿಸಿದಾಗ ದುರದೃಷ್ಟಕರ ಬಸ್ ಆರೋನ್‌ಗೆ ಹೋಗುತ್ತಿದ್ದಾಗ ಡಂಪರ್ ಗುಣಾ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆಘಟನೆಯ ಸಮಯದಲ್ಲಿ ಬಸ್‌ನಲ್ಲಿ ಸುಮಾರು ೩೦ ಪ್ರಯಾಣಿಕರಿದ್ದರು ಮತ್ತು ಅವರಲ್ಲಿ ನಾಲ್ವರು ಬಸ್‌ನಿಂದ ಸುರಕ್ಷಿತವಾಗಿ ಹೊರಬಂದಿದ್ದಾರೆ ಎಂದು ತಿಳಿಸಿದ್ದಾರೆ.ಘಟನೆಯ ಕುರಿತು ತನಿಖೆಗೆ ಆದೇಶಿಸಿರುವ ವಿಷಯವನ್ನು ಗುಣ ಜಿಲ್ಲಾಧಿಕಾರಿ ತರುಣ್ ರಥಿ ಮಾಹಿತಿ ನೀಡಿದ್ದು, ಗಾಯಗೊಂಡ ಎಲ್ಲಾ ಮಂದಿಗೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಘಟನೆಯ ಬಗ್ಗೆ ತೀವ್ರ ನೋವು ತರಿಸಿದೆ. “ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.ಜೊತೆಗೆ ಘಟನೆಯ ಬಗ್ಗೆ ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತನಿಖೆಗೆ ಆದೇಶ: ಪರಿಹಾರ

ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಘಟನೆ ಸಂಬಂಧ ತನಿಖೆಗೆ ಆದೇಶಿಸಿದ್ದಾರೆ.ಮೃತ ಕುಟುಂಬಕ್ಕೆ ತಲಾ ೪ ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ ೫೦,೦೦೦ ರೂಪಾಯಿಗಳನ್ನು ಘೋಷಿಸಿದ್ದಾರೆ.