ಬಸ್‍ನಲ್ಲಿ ಪ್ರಯಾಣಿಸ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಕಲಬುರಗಿ,ಏ.15-ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕಮಲಾಪುರ ಬಳಿ ನಡೆದಿದೆ.
ವಿಜಯಕುಮಾರ್ ಶಿವಶರಣಪ್ಪ ನಾಗನಳ್ಳಿ (45) ಮೃತವ್ಯಕ್ತಿ. ಮೂಲತಃ ನಾಗನಹಳ್ಳಿಯವರಾದ ಇವರು, ಕಲಬುರಗಿಯಿಂದ ಭಾಲ್ಕಿಯಲ್ಲಿನ ತಮ್ಮ ಸಹೋದರಿಯ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆಂದು ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.