ಅಫಜಲಪುರ:ಜೂ.27: ರಾಜ್ಯದಲ್ಲಿ ಮಹಿಳೆಯರಿಗೆ ಶಕ್ತಿ ಯೋಜನೆ, ಜಾರಿಯಾದಾಗಿನಿಂದ ಗ್ರಾಮೀಣ ಭಾಗದ ಶಾಲಾ ವಿದ್ಯಾರ್ಥಿಗಳು ಶಾಲೆಗೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಪಟ್ಟು ಹಿಡಿದು ಅಫಜಲಪುರ ತಾಲೂಕಿನ ಕೊಳ್ಳೂರು, ಹಿಚಗೇರಾ ಮುಂತಾದ ಗ್ರಾಮಗಳ ವಿದ್ಯಾರ್ಥಿಗಳು ಕೇಂದ್ರ ಬಾಸ್ ನಿಲ್ದಾಣ ಹಾಗೂ ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು.