ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯ

ಬೆಂಗಳೂರು, ನ.೨-ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹಲವು ಕ್ರಮ ಕೈಗೊಳ್ಳುತ್ತಿದ್ದು, ಇನ್ಮುಂದೆ ಬಸ್‌ಗಳಲ್ಲೂ ಮಾಸ್ಕ್ ಕಡ್ಡಾಯ ಮಾಡಿದ್ದು, ನಿಯಮ ಉಲ್ಲಂಘಿಸಿದರೆ ೧೦೦ ರೂ.ದಂಡ ಕಟ್ಟಬೇಕಿದೆ.
ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದವರಿಗೆ ೧೦೦ ರೂ. ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ.
ಮುಖ್ಯವಾಗಿ ಬೆಂಗಳೂರಿನ ಬಿಎಂಟಿಸಿ ಬಸ್‌ಗಳಲ್ಲಿ ಈ ನಿಯಮ ಅನುಷ್ಟಾನಕ್ಕೆ ಬಂದಿದ್ದು, ಮಾಸ್ಕ್ ಹಾಕದ ಪ್ರಯಾಣಿಕರಿಗೆ ಸಾರಿಗೆ ಇಲಾಖೆಯ ಟಿಕೆಟ್ ಚೆಕ್ಕಿಂಗ್ ಇನ್ಸ್‌ಪೆಕ್ಟರ್ ದಂಡ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.