ಬಸ್‌ ಡಿಕ್ಕಿ: ವಿದ್ಯಾರ್ಥಿನಿ ಮೃತ್ಯು

ಮಂಗಳೂರು, ಎ.೧- ನಗರದ ಮರಕಡ ಜಂಕ್ಷನ್‌ನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಕಾಲೇಜು ವಿದ್ಯಾರ್ಥಿನಿ‌ ಮೃತಪಟ್ಟ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಕಾವೂರು ಕುಂಜತ್ ಬೈಲ್ ಜ್ಯೋತಿನಗರ ನಿವಾಸಿ ಚೆಲ್ಲಯ್ಯ ಎಂಬವರ ಪುತ್ರಿ ಸಿ.ಪವಿತ್ರಾ (21) ಎಂದು ಗುರುತಿಸಲಾಗಿದೆ. ಕಾಲೇಜು ವಿದ್ಯಾರ್ಥಿನಿಯಾಗಿರುವ ಈಕೆ ಬುಧವಾರ ಬೆಳಗ್ಗೆ ಸುಮಾರು‌ 9 ಗಂಟೆಯ ವೇಳೆಗೆ ಮರಕಡ ಜಂಕ್ಷನ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಇದರಿಂದ ಪವಿತ್ರ ಸ್ಥಳದಲ್ಲೇ ಮೃತಪಟ್ಟರು ಎಂದು ಪ್ರಕರಣ ದಾಖಲಿಸಿರುವ ಮಂಗಳೂರು ಸಂಚಾರ ಉತ್ತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.