ಬಸ್‌-ದ್ವಿಚಕ್ರ ವಾಹನ ನಡುವೆ ಅಪಘಾತ: ಸವಾರ ಮೃತ್ಯು

ಬೆಳ್ತಂಗಡಿ, ಮಾ.೨೮- ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಮೃತಪಟ್ಟ ಘಟನೆ ಪಡಂಗಡಿ ಗ್ರಾಮ ಪಂಚಾಯತ್ ಬಳಿಯ ರಸ್ತೆಯಲ್ಲಿ ಶನಿವಾರ ನಡೆದಿದೆ.

ಮೃತಪಟ್ಟ ಮ್ಯಕ್ತಿಯನ್ನು ಪೊಯ್ಯೆಗುಡ್ಡೆ ನಿವಾಸಿ ಬೈಕ್ ಸವಾರ ಜಾಬಿರ್ (34) ಎಂದು ಗುರುತಿಸಲಾಗಿದೆ. ಧರ್ಮಸ್ಥಳದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್ಸು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಜಾಬಿರ್ ಅವರು ಕಳೆದ 15 ದಿನಗಳ ಹಿಂದೆಯಷ್ಟೇ ವಿದೇಶದಿಂದ ಊರಿಗೆ ಬಂದಿದ್ದರು ಎನ್ನಲಾಗಿದ್ದು, ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.