ಬಸ್ ಕೊರತೆಯಿಂದ ವಿದ್ಯಾರ್ಥಿಗಳ ಪರದಾಟ

ಕಲಬುರಗಿ,ಜ.5- ನಗರದ ಹಿರಾಪೂರ ಕ್ರಾಸ್ ಬಳಿಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಮತ್ತು ಸಮಯಕ್ಕೆ ಸರಿಯಾಗಿ ಬಸ್ ಸೌಕರ್ಯವಿಲ್ಲದ ಕಾರಣದಿಂದಾಗಿ ಜನರಿಂದ ತುಂಬಿರುವ ಬಸ್ ನಲ್ಲಿ ಹತ್ತಲು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ಇಲ್ಲಿನ ಅವ್ಯವಸ್ಥೆಯನ್ನು ವಿಧಾನ ಪರಿಷತ್ತಿನ ಸದಸ್ಯರಾದ ಡಾ. ತಳವಾರ ಸಾಬಣ್ಣಾ ಅವರು ನೋಡಿ ಸ್ವತಃ ತಾವೇ ಪೆÇೀಟೋಗಳನ್ನು ತೆಗೆದುಕೊಂಡು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಫಲತೆಯನ್ನು ಇಲ್ಲಿನ ಅವ್ಯವಸ್ಥೆಯಿಂದ ಗೊತ್ತಾಗುತ್ತದೆ.
ನಗರ ಸಂಚಾರದ ಬಸ್‍ಗಳ ಓಡಾಟವನ್ನು ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳಿಗೂ ಮತ್ತು ಸಾರ್ವಜನಿಕರಿಗೂ ಅನುಕೂಲ ಮಾಡಿಕೊಡುವಂತೆ ಅವರು ಮನವಿ ಮಾಡಿದ್ದಾರೆ.
ಸಾರಿಗೆ ಸಂಸ್ಥೆಯ ವಿಫಲತೆಯಿಂದಾಗಿ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ತರಗತಿಗಳಿಗೆ ಸಮಯಕ್ಕೆ ಸರಿಯಾಗಿ ಹೋಗಲು ಆಡಚಣೆಯಾಗುತ್ತಿದೆ. ವಿಧಾನ ಮಂಡಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಸದಸ್ಯರು ಬಸ್ ಕೊರತೆಯ ಬಗ್ಗೆ ಪ್ರಶ್ನಿಸಿದ್ದಾರೆ ಆದರೂ ಕೂಡ ಸಮಸ್ಯೆ ಇನ್ನು ಬಗೆಹರಿಸಿಲ್ಲ ಇದು ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಕಾರಣ, ಬಸ್ ಕೊರತೆಯ ಸಮಸ್ಯೆಯನ್ನು ಬಗೆಹರಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸಲು ಅನುಕೂಲ ಮಾಡಿಕೊಡಬೇಕೆಂದು ವಿಧಾನ ಪರಿಷತ್ತಿನ ಸದಸ್ಯರಾದ ಡಾ. ತಳವಾರ ಸಾಬಣ್ಣಾ ಅವರು ಅಧಿಕಾರಿಗಳಿಗೆ ಅವರು ಒತ್ತಾಯಿಸಿದ್ದಾರೆ.