ಬಸ್-ಟ್ರಕ್ ಡಿಕ್ಕಿ 7 ಮಂದಿ ಸಾವು

ಮುಂಬೈ, ಮೇ ೨೩- ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭಾರಿ ಅಪಘಾತದಲ್ಲಿ ೭ ಮಂದಿ ಸಾವನ್ನಪ್ಪಿರುವ ದುರ್ಘಟನೆ ಇಂದು ಮುಂಜಾನೆ ನಡೆದಿದೆ.
ಮಹಾರಾಷ್ಟ್ರದ ಮುಲ್ಧಾನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ೧೩ ಮಂದಿ ಗಾಯಗೊಂಡಿದ್ದಾರೆ.
ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್ ಪುಣೆಯ ಮೆಹೆಕರ್‌ನಿಂದ ಪ್ರಯಾಣಿಕರನ್ನು ಹೊತ್ತು ಬರುತ್ತಿತ್ತು. ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್ ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ, ತುರ್ತು ಸೇವೆಗಳು ಘಟನಾ ಸ್ಥಳಕ್ಕೆ ತ್ವರಿತವಾಗಿ ಸ್ಪಂದಿಸಿದ್ದು, ಗಾಯಗೊಂಡವರಿಗೆ ತಕ್ಷಣದ ವೈದ್ಯಕೀಯ ನೆರವು ನೀಡಿವೆ ಎಂದು ಮೂಲಗಳು ತಿಳಿಸಿವೆ.