ಬಸ್ ಡಿಕ್ಕಿ : ವ್ಯಕ್ತಿ ಸಾವು

ಸಕಲೇಶಪುರ, ಏ. ೨೮- ಅತಿವೇಗ ಮತ್ತು ಅಜಾಗರೂಕತೆಯಿಂದ ಕೆ.ಎಸ್ ಆರ್ ಟಿ ಸಿ ಹಾಗೂ ಬೈಕ್ ನಡುವೆ ಮುಖಾ ಮುಖಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಬೇಲೂರು ತಾಲ್ಲೂಕು ಅಂಕಿಹಳ್ಳಿ ಗ್ರಾಮದ ಪ್ರದೀಪ್ (೧೯) ಮೃತಪಟ್ಟ ದುರ್ದೈವಿಯಾಗಿದ್ದು, ಇಂದು ಸಂಜೆ ೪ ಗಂಟೆ ಸಮಯದಲ್ಲಿ ಬೈಕ್‌ನಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಕೊಡ್ಲಿಪೇಟೆಗೆ ಹೊಗುವ ಕೆ ಎ ೧೮ ಎಫ್ ೬೩೬ ಮುಖಾ ಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪ್ರದೀಪ್ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಈ ಘಟನೆ ಬಾಗೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ ೭೫ ರಲ್ಲಿ ನಡೆದಿದೆ. ಸಕಲೇಶಪುರ ಗ್ರಾಮಾಂತರ ಪೋಲೀಸರು ಪ್ರಕರಣವನ್ನು ದಾಖಲಿಸಿ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.