ಬಸ್ ನಿಲ್ದಾಣದಲ್ಲಿ ನಿಂತವರ ಮೇಲೆ ಹರಿದ ಲಾರಿ ಬಾಲಕಿ ಸಾವು

ಯಾದಗಿರಿ,ಏ.೧೨- ಬಸ್ ನಿಲ್ದಾಣದ ಮುಂದೆ ನಿಂತಿದ್ದವರ ಮೇಲೆ ಲಾರಿ ಹರಿದು ಓರ್ವ ಬಾಲಕಿ ಸ್ಥಳದಲ್ಲೇ ಮೃತಪಟ್ಟು ಐವರು ಗಂಭೀರವಾಗಿ ಗಾಯಗೊಂಡ ದುರ್ಘಟನೆ ಗುರುಮಠಕಲ್ ಸಮೀಪದ ಬೋರಬಂಡದಲ್ಲಿ ನಡೆದಿದೆ.
ಹೈದರಾಬಾದ್?ನಿಂದ ಬೆಳಗಾವಿಗೆ ಹೋಗುತ್ತಿದ್ದ ಹಣ್ಣು ತುಂಬಿದ ಲಾರಿ ಗುರುಮಠಕಲ್ ಬಸ್? ನಿಲ್ದಾಣದ ಎದುರು ನಿಂತಿದ್ದವರ ಮೇಲೆ ಹರಿದಿದ್ದ ಮೋನಿಕಾ(೩) ಎಂಬ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.
ಅಪಘಾತ ಸಂಭವಿಸಿದ ಬಳಿಕ ಸಕಾಲಕ್ಕೆ ಆಂಬ್ಯುಲೆನ್ಸ್ ಬಾರದ ಕಾರಣ ಹೈವೇ ಪೆಟ್ರೋಲಿಂಗ್ ವಾಹನದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.