ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ


ಹುಬ್ಬಳ್ಳಿ,ಅ.19: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸವೊಂದು ಪಲ್ಟಿಯಾದ್ದರಿಂದ ಕೆಲ ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಾಳ ಹತ್ತಿರ ಸಂಭವಿಸಿದೆ.
ಬೆಂಗಳೂರಿನಿಂದ ಬೆಳಗಾವಿ ಕಡೆಗೆ ಬಸ್ ಹೋಗುತ್ತಿದ್ದ ಸಂದರ್ಭದಲ್ಲಿ ಬಸ್ ಪಲ್ಟಿಯಾಗಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಬಸ್‍ನೊಳಗೆ ಇದ್ದ ಕೆಲ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಕುರಿತಂತೆ ಹುಬ್ಬಳ್ಳಿ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.