ಬಸ್ ಪ್ರಾರಂಭಕ್ಕೆ ಶಾಸಕರ ಸೂಚನೆ

ಬ್ಯಾಡಗಿ, ಡಿ 31- ಕೊರೋನಾ ವೈರಸ್ ಹಿನ್ನಲೆಯಲ್ಲಿ ತಾಲೂಕಿನ ಕೆಲವೊಂದು ಗ್ರಾಮೀಣ ಪ್ರದೇಶಗಳಲ್ಲಿ ಸ್ಥಗಿತಗೊಳಿಸಲಾಗಿದ್ದ ಸರ್ಕಾರಿ ಬಸ್ಸುಗಳ ಸಂಚಾರವನ್ನು ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪುನರ್ ಪ್ರಾರಂಭಿಸುವಂತೆ ಬ್ಯಾಡಗಿ ಘಟಕದ ವ್ಯವಸ್ಥಾಪಕರಿಗೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸೂಚಿಸಿದ್ದಾರೆ.
ತಮ್ಮ ಕಾರ್ಯಾಲಯದಲ್ಲಿ ಘಟಕ ವ್ಯವಸ್ಥಾಪಕರಿಗೆ ಈ ಬಗ್ಗೆ ಸೂಚನೆ ನೀಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿನಿತ್ಯ ಪ್ರಯಾಣಕ್ಕಾಗಿ ತೊಂದರೆ ಅನುಭವಿಸುತ್ತಿರುವ ಬಹಳಷ್ಟು ಸಾರ್ವಜನಿಕರಿಂದ ಅನೇಕ ದೂರುಗಳು ಬಂದಿವೆ. ಅಲ್ಲದೇ ಜನೇವರಿ 1 ರಿಂದ ಶಾಲಾ ಕಾಲೇಜುಗಳು ಪ್ರಾರಂಭವಾಗುತ್ತಿದ್ದು, ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರತಿನಿತ್ಯ ಗ್ರಾಮೀಣ ಪ್ರದೇಶಗಳಿಗೆ ಸಂಚಾರ ಮಾಡುವ ಬಸ್ಸುಗಳನ್ನು ಎಂದಿನಂತೆ ಸಂಚಾರ ಮಾಡಲು ಕ್ರಮ ವಹಿಸುವಂತೆ ತಿಳಿಸಿದರು.