ಬಸ್ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ


ಶಿರಹಟ್ಟಿ, ನ 13: ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಇಲ್ಲಿನ ಬಸ್ ನಿಲ್ಧಾಣದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟಣೆ ನಡೆಸಿದರು.
ಲಕ್ಷ್ಮೇಶ್ವರ, ಗದಗ ಸೇರಿದಂತೆ ವಿವಿಧೆಡೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಸರಿಯಾದ ಬಸ್ ಸೌಲಭ್ಯವಿಲ್ಲದೆ ನಿಗದಿತ ವೇಳೆಗೆ ತಲುಪುವಲ್ಲಿ ವಿಳಂಬವಾಗುತ್ತಿದೆ.ಈ ಕುರಿತು ಹಲವು ಬಾರಿ ಡಿಪೋ ಮ್ಯಾನೇಜರುಗಳಿಗೆ ಮತ್ತು ಸಾರಿಗೆ ಅಧಿಕಾರಿಗಳ ಗಮನಕ್ಕೆ ತಂದರೂ ಸಹಿತ ಯಾವುದೇ ಸೌಲಭ್ಯ ದೂರತಿಲ್ಲ, ಆದರಿಂದ ನಿತ್ಯ ಗ್ರಾಮೀಣ ವಿದ್ಯಾಥಿರ್üಗಳು ಸಮಸ್ಯೆ ಎದುರಿಸುವಂತಾಗಿದೆ ಎಂದು ವಿದ್ಯಾರ್ಥಿಗಳು ತಿಳಿಸಿದರು.
ಸಮರ್ಪಕವಾಗಿ ಬಸ್ ಸೌಲಭ್ಯ ಒದಗಿಸುವವರೆಗೂ ಪ್ರತಿಭಟನೆಯನ್ನು ಕೈಬಿಡುವುದಿಲ್ಲ ಎಂದು ಅಗ್ರಹಿಸಿ ಪ್ರತಿಭಟನೆಗೆ ಮುಂದಾದರು.
ಈ ವೇಳೆ ಫೋನ ಮೂಲಕ ಡಿಪೋ ಮ್ಯಾನೇಜರ ವರ್ಣೇಕರ ಮಾತನಾಡಿ ನಾಳೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಜರುಗಿಸವುದಾಗಿ ಭರವಸೆ ನೀಡಿದ್ದರಿಂದ ಪ್ರತಿಭಟನೆಯನ್ನು ಕೈಬಿಡಲಾಯಿತು.