ಬಹಳ ದಿನಗಳ ನಂತರ ಮತ್ತೆ ಸಿನಿಮಾದತ್ತ ಅನಿರುದ್ಧ್

“ಜೊತೆ ಜೊತೆಯಲಿ” ಧಾರಾವಾಹಿಯಲ್ಲಿ ನೇಮು, ಫೇಮು ಪಡೆದ ಬಳಿಕ ಧಾರಾವಾಹಿ ಲೋಕದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ನಟ ಅನಿರುದ್ಧ್ ಇದೀಗ ಬಹಳ ವರ್ಷಗಳ ನಂತರ ಮತ್ತೆ ಸಿನಿಮಾದತ್ತ ಮುಖ ಮಾಡಿದ್ದಾರೆ.

ಆನಂದರಾಜ್ ನಿರ್ದೇಶನ ಡಾರ್ಕ್ ಕಾಮಿಡಿ ಥ್ರಿಲ್ಲರ್ ಕಥಾಹಂದರದವೊಂದಿರುವ ಚಿತ್ರದಲ್ಲಿ ನಟ ಅನಿರುದ್ಧ್ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಮೈಸೂರಿನ ವಿಷ್ಣುವರ್ದನ್ ಸ್ಮಾರಕದಲ್ಲಿ ಸ್ಕ್ರಿಪ್ಟ್ ಪೂಜೆ ನೆರವೇರಿದ್ದು ಮುಂದಿನ ತಿಂಗಳಿನಿಂದ ಚಿತ್ರ ಆರಂಭವಾಗಲಿದೆ.

ಭಾರತಿ ವಿಷ್ಣುವರ್ಧನ್ ಸೇರಿದಂತೆ ಹಲವು ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.. ಆಗಸ್ಟ್ 10 ರಿಂದ ಬೆಂಗಳೂರು, ತುಮಕೂರು ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.ರೂಪ ಡಿ.ಎನ್ ಚಿತ್ರ ನಿರ್ಮಿಸುತ್ತಿದ್ದಾರೆ.

ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ರೆಚೆಲ್ ಡೇವಿಡ್‍ಅಭಿನಯಿಸುತ್ತಿದ್ದಾರೆ.ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ಶಿವಮಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸದ್ಯದಲ್ಲೇ ಶೀರ್ಷಿಕೆ ಅನಾವರಣವಾಗಲಿದೆ. ಉದಯಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನವಿದೆ..